ಗ್ಯಾರಂಟಿ ಯೋಜನೆ ಮುಂದುವರಿಕೆಗೆ ಸಹಕರಿಸಿ

6 nrp 2
ಎನ್.ಆರ್.ಪುರದಲ್ಲಿ ಕೆಪಿಸಿಸಿ ಎಸ್‌ಸ್ಸಿ ವಿಭಾಗದ ರಾಜ್ಯ ಸಮಿತಿ ಸದಸ್ಯ ಬಿ.ಎಸ್.ಸುಬ್ರಹ್ಮಣ್ಯ ಸುದ್ದಿಗೋಷ್ಠಿ ನಡೆಸಿದರು. ಸುನೀಲ್‌ಕುಮಾರ್, ಕೆ.ಎ.ಅಬೂಬಕರ್, ತೆರಿಯನ್ ಇದ್ದರು.
Published on

ಎನ್.ಆರ್.ಪುರ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸಿ ಬಡವರ, ಅಲ್ಪ ಸಂಖ್ಯಾತರ ,ಹಿಂದುಳಿದವರ ಮೀಸಲಾತಿ ತೆಗೆದುಹಾಕುತ್ತಾರೆ ಎಂದು ಕೆಪಿಸಿಸಿ ಎಸ್‌ಸ್ಸಿ ವಿಭಾಗದ ರಾಜ್ಯ ಸಮಿತಿ ಸದಸ್ಯ ಬಿ.ಎಸ್.ಸುಬ್ರಹ್ಮಣ್ಯ ಹೇಳಿದರು.
ಕೇಂದ್ರದಲ್ಲಿ 400 ಸ್ಥಾನ ಪಡೆದು ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶದ ಅಲ್ಪ ಸಂಖ್ಯಾತರ ಸ್ವಾತಂತ್ರಕ್ಕೆ ಧಕ್ಕೆ ಬರಲಿದೆ. ಮೀಸಲಾತಿ ತೆಗೆದರೆ ದಲಿತರು, ಅಲ್ಪ ಸಂಖ್ಯಾತರು ಸೇರಿದಂತೆ ಬಡವರಿಗೆ ಅನ್ಯಾಯವಾಗುತ್ತದೆ. ಕಾಂಗ್ರೆಸ್ ಬಡವರಿಗಾಗಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದೆ. ಈ ಯೋಜನೆಗಳನ್ನು ಮುಂದುವರಿಸಲು ಅನುಕೂಲವಾಗುವಂತೆ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ತಿಳಿಸಿದರು.
10 ವರ್ಷ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿರುವ ಶೋಭಾ ಕರಂದ್ಲಾಜೆ ಅವರು ಜನಪರ ಕೆಲಸ ಮಾಡಲಿಲ್ಲ. ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ, ಬಫರ್ ಯೋಜನೆ, ಒತ್ತುವರಿ ಸಮಸ್ಯೆಗಳ ಬಗ್ಗೆ ಸ್ಪಂದಿಸಲಿಲ್ಲ. ಇದರಿಂದ ಬಿಜೆಪಿ ಪಕ್ಷದವರೇ ಗೋ ಬ್ಯಾಕ್ ಎಂದು ವಾಪಸ್ ಕಳಿಸಿದ್ದಾರೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ ಹೆಗ್ಡೆ ಸಂಸದರಾಗಿದ್ದಾಗ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರಿಗೆ ಹೆಚ್ಚು ಪರಿಹಾರ ನೀಡುವಂತೆ ಕೇಂದ್ರದ ಮೇಲೆ ಒತ್ತಡ ತಂದು ಯಶಸ್ವಿಯಾಗಿದ್ದರು. ಆದ್ದರಿಂದ ಜಯಪ್ರಕಾಶ ಹೆಗ್ಡೆ ಅವರನ್ನು ಗೆಲ್ಲಿಸಬೇಕು.ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು ಅದೇ ಸ್ಥಾನದಲ್ಲಿ ಮುಂದುವರಿಯಲಿ ಎಂದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನೀಲ್‌ಕುಮಾರ್, ಕೆ.ಎ.ಅಬೂಬಕರ್, ಮಾಜಿ ಉಪಾಧ್ಯಕ್ಷ ತೆರಿಯನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net