ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಸಾಲ: ಕೈಮಗ್ಗ ನೇಕಾರರಿಗೆ ನೆರವು

handloom.jpg
Published on

ಮಂಡ್ಯ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಕೃತ ಬ್ಯಾಂಕಿನಿಂದ ಕೈಮಗ್ಗ ನೇಯ್ಗೆ ಚಟುವಟಿಕೆಗಾಗಿ 50 ಸಾವಿರ ರೂನಿಂದ 2 ಲಕ್ಷ ರೂವರೆಗೆ ಆರ್ಥಿಕ ಸೌಲಭ್ಯ ಪಡೆಯಲು ಅವಕಾಶವಿರುತ್ತದೆ. ಅರ್ಹರು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು. ಮಾಹಿತಿಗೆ ದೂ.ಸಂ 08232-222366 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net