ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೆರವು

28-KGL-5
ತಾಲೂಕಿನ ಸತ್ತೇಗಾಲ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಅಪಘಾತದಿಂದ ಮೃತಪಟ್ಟಿದ್ದ ಸತ್ತೇಗಾಲ ನಿವಾಸಿ ಕೆ.ನಟರಾಜು ಹಾಗೂ ಮಾಯಪ್ಪ ಅವರ ನಿವಾಸಕ್ಕೆ ಬಿಜೆಪಿ ಮುಖಂಡ ಡಾ.ಎಸ್.ದತ್ತೇಶ್ ಕುಮಾರ್ ಭೇಟಿ ಕುಟುಂಬಸ್ಥರಿಗೆ ಆರ್ಥಿಕ ನೆರವು ನೀಡಿದರು.
Published on

ಕೊಳ್ಳೇಗಾಲ: ತಾಲೂಕಿನ ಸತ್ತೇಗಾಲ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದವರ ನಿವಾಸಕ್ಕೆ ಬಿಜೆಪಿ ಮುಖಂಡ ಡಾ.ಎಸ್.ದತ್ತೇಶ್ ಕುಮಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಜೂ.27ರಂದು ಸತ್ತೇಗಾಲ ಬಳಿ ಕಾರು-ಬೈಕ್ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರರಾದ ಕೆ.ನಟರಾಜು ಹಾಗೂ ಮಾಯಪ್ಪ ಅಸುನೀಗಿದ್ದರು. ಈ ಹಿನ್ನೆಲೆಯಲ್ಲಿ ಡಾ.ಎಸ್.ದತ್ತೇಶ್ ಕುಮಾರ್ ಗ್ರಾಮಕ್ಕೆ ಭೇಟಿ ನೀಡಿ ಮೃತರ ಮನೆಗಳಿಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳುವದರ ಜತೆಗೆ ವ್ಯಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. ಗ್ರಾಮದ ಬಿಜೆಪಿ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net