ಗ್ಯಾರಂಟಿಯಿಂದ ಮಧ್ಯಮ ವರ್ಗಕ್ಕೆ ನೆರವು

IMG-20240407-WA0134
Published on
  • ಚಾಮರಾಜನಗರ: ಹಲವಾರು ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಕುಟುಂಬಗಳಿಗೆ ನೆರವಾಗಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

  • ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ, ರಾಘವಾಪುರ ಹಾಗೂ ಕೋಟೆಕೆರೆ ಗ್ರಾಮಗಳಲ್ಲಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರ ಭಾನುವಾರ ಮತಯಾಚನೆ ಮಾಡಿ ಮಾತನಾಡಿದರು.

  • ಹಲವಾರು ಸಂಕಷ್ಟದ ನಡುವೆಯೂ ಸರ್ಕಾರ ತಾನು ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಹೊರೆ ಕಡಿಮೆ ಮಾಡಲು ಸರ್ಕಾರ ಮಹಿಳೆಯರಿಗೆ ಹಲವಾರು ಉಚಿತ ಭಾಗ್ಯಗಳನ್ನು ನೀಡಿದೆ. ಇದರಿಂದಾಗಿ ಕುಟುಂಬಕ್ಕೆ ಆಗುತ್ತಿರುವ ವೆಚ್ಚ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಇನ್ನೂ ಹಲವಾರು ಜನಪರ ಕಾರ್ಯವನ್ನು ಕೈಗೊಳ್ಳಲಿದೆ. ಆದ್ದರಿಂದ ಪ್ರತಿಯೊಬ್ಬರೂ ಕಾಂಗ್ರೆಸ್ ಅಭ್ಯರ್ಥಿಗೆ ಮತನೀಡಿ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
  • ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ನಂಜಪ್ಪ, ಮುಖಂಡರಾದ ಮುನಿರಾಜು, ಬಸವರಾಜು, ನೀಲಕಂಠಪ್ಪ ಸೇರಿದಂತೆ ಹಲವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net