ಕೆಎಎಸ್​ ಪರೀಕ್ಷೆಯಲ್ಲಿ ಫೇಲಾದೆ ಎಂದು ಆತ್ಮಹತ್ಯೆ ಮಾಡಿಕೊಂಡ ಅಸಿಸ್ಟೆಂಟ್ ಪ್ರೊಫೆಸರ್​!

Meena
Published on

ನೆಲಮಂಗಲ: ಈಕೆ ಡಬಲ್​ ಗ್ರ್ಯಾಜುವೇಟ್​. ಆದರೆ ಕೆಎಎಸ್​ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ತೀವ್ರ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ವಿಜಯನಗರ ಬಡಾವಣೆಯಲ್ಲಿ ಈ ಪ್ರಕರಣ ನಡೆದಿದೆ.

ಚಿಂತಾಮಣಿ ತಾಲ್ಲೂಕು ಟಿ. ದೇವಪಲ್ಲಿ ಮೂಲದ ಡಿ.ಎಸ್​. ಮೀನಾ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಎಂಎ ಪದವೀಧರೆ ಆಗಿರುವ ಇವರು 18 ವರ್ಷಗಳ ಹಿಂದೆ ಲಚ್ಚಿ ರೆಡ್ಡಿ ಎಂಬವರೊಂದಿಗೆ ವಿವಾಹವಾಗಿದ್ದರು. ಇವರು ಕಾಲೇಜೊಂದರಲ್ಲಿ ಕನ್ನಡ ವಿಭಾಗದಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಕೆಎಎಸ್ ಪರೀಕ್ಷೆ ಬರೆದಿದ್ದ ಮೀನಾ, ಆ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆ ಮೇಲಿನ ಶೆಡ್​ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲ ಟೌನ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net