ಮದುವೆ ನಿಶ್ಚಿತಾರ್ಥ ಬೆನ್ನಲ್ಲೇ ಖಾಸಗಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಆತ್ಮಹತ್ಯೆಗೆ ಶರಣು

College lecturer
Published on

ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯೊಬ್ಬರು ಬುಧವಾರ ಮಧ್ಯಾಹ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಾಂಧಿಬಜಾರ್ ತಿಗಳಯ್ಯನ ಕೇರಿಯ ಜೆ.ಸ್ವಾತಿ (26) ಮೃತರು. ವಾಣಿಜ್ಯಶಾಸ್ತ್ರದ ಉಪನ್ಯಾಸಕಿ ಆಗಿದ್ದ ಸ್ವಾತಿ ಐದು ವರ್ಷದಿಂದ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದರು. ಶನಿವಾರ ಕಾಲೇಜು ನಡೆದಿದ್ದು ಕಳೆದ ನಾಲ್ಕು ದಿನದಿಂದ ರಜೆ ಇದ್ದ ಕಾರಣ ಮನೆಯಲ್ಲಿದ್ದರು.

ಒಂದು ತಿಂಗಳ ಹಿಂದಷ್ಟೇ ಸ್ವಾತಿ ಅವರಿಗೆ ಮದುವೆ ನಿಶ್ಚಿತಾರ್ಥವಾಗಿತ್ತು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದರು. ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಡೆತ್‌ನೋಟ್ ಬರೆದಿಟ್ಟಿದ್ದು, ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net