ಅಸ್ತಾಪನಹಳ್ಳಿ ಶಾಲೆಗೆ ಸಿಸಿ ಕ್ಯಾಮರಾ ಅಳವಡಿಕೆ

Astapanahalli, Ashram School, Inspection,
Published on

ಚನ್ನಗಿರಿ: ಅಸ್ತಾಪನಹಳ್ಳಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಮೂಲ ಸೌಕರ್ಯಗಳ ಕೊರತೆ ಎದದ್ದು ಕಾಣುತ್ತಿದೆ ಎಂದು ಜಿಲ್ಲಾ ಪರಿಶಿಷ್ಟ ಪಂಗಡಗಳ ಅಧಿಕಾರಿ ಶಂಕರ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

‘ಅಸ್ತಾಪನಹಳ್ಳಿ ವಾಲ್ಮೀಕಿ ಆಶ್ರಮ ಶಾಲೆಗಿಲ್ಲ ಮೂಲಸೌಕರ್ಯ’ ಎಂಬ ಶೀರ್ಷಿಕೆಯಡಿ ವಿಜಯವಾಣಿಯಲ್ಲಿ ಪತ್ರಿಕೆ ವರದಿ ಪ್ರಕಟವಾಗುತ್ತಿದ್ದಂತೆ ಬುಧವಾರ ಶಾಲೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು.

ಶಾಲೆಯಲ್ಲಿ ಮೂಲಸೌಕರ್ಯಗಳ ಕೊರತೆ ನೀಗಿಸಬೇಕು. ಉತ್ತಮ ವಸತಿ ಹಾಗೂ ಶೌಚ ಗೃಹ ವ್ಯವಸ್ಥೆ ಕಲ್ಪಿಸಬೇಕು. ಮಕ್ಕಳ ಕಲಿಕೆಗೆ ಕಂಪ್ಯೂಟರ್ ಒದಗಿಸಬೇಕು. ಶಾಲೆಯಲ್ಲಿ ದಿನದ 24 ಗಂಟೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಸೂಚಿಸಿದರು.

ವಸತಿ ಶಾಲೆಯಲ್ಲಿ ಚಿಕ್ಕ ಮಕ್ಕಳು ಇರುವುದರಿಂದ ರಾತ್ರಿ ಸಮಯದಲ್ಲಿ ಕಡ್ಡಾಯವಾಗಿ ಒಬ್ಬ ಶಿಕ್ಷಕರು ಇರಲೇಬೇಕು.ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ತಿಳಿಸಿದರು.

ಅಡುಗೆ ವಿಚಾರದಲ್ಲಿ ನಿರ್ಲಕ್ಷೃ ವಹಿಸಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಯಾವುದೇ ಸಣ್ಣ ಅಚಾತುರ್ಯ ನಡೆದರೂ ಸಂಬಂಧಿಸಿದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಬ್ಬಂದಿಗೆ ಎಚ್ಚರಿಸಿದರು.

ಕಟ್ಟಡ ದುರಸ್ತಿಗೆ 2022ರಲ್ಲಿ 50 ಲಕ್ಷ ರೂ. ಮಂಜೂರು ಮಾಡುವಂತೆ ಸಂಬಂಧಿಸಿದ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣ ಮಂಜೂರಾದ ತಕ್ಷಣ ರಿಪೇರಿ ಮಾಡಿಸಲಾಗುತ್ತದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net