ಕಲಬುರಗಿ : ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿರುವ ಪುರಸಭೆಯ ಕಚೇರಿಯಲ್ಲಿ ನೈರ್ಮಲ್ಯ ನಿರೀಕ್ಷರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸ್ಯಾನಿಟರಿ ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಜಶೇಖರ ಹಿರೇಮಠ ಎಂಬುವರೇ ಹಲ್ಲೆಗೊಳಗಾಗಿರುವ ಪುರಸಭೆ ಸಿಬ್ಬಂದಿ. ಹೋರಾಟಗಾರ ಮಹೇಶಕುಮಾರ ರಾಠೋಡ ಹಲ್ಲೆ ನಡೆಸಿದ್ದಾರೆ.
ಪುರಸಭೆಯಲ್ಲಿ ಸ್ವಚ್ಛತಾ ಕಾರ್ಮಿಕರಾಗಿ ಹಿಂದೆ ಕೆಲಸ ಮಾಡುತ್ತಿದ್ದವರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕಳೆದ ಮರ‍್ನಾಲ್ಕು ದಿನಗಳಿಂದ ಪುರಸಭೆ ಮುಂಭಾಗದಲ್ಲಿ ಧರಣಿ ನಡೆಸಲಾಗುತ್ತಿದೆ. ಪೌರ ಕಾರ್ಮಿಕರ ಪರವಾಗಿ ಹೋರಾಟ ನಡೆಸುತ್ತಿರುವ ಮಹೇಶಕುಮಾರ ರಾಠೋಡ ಧರಣಿಗೆ ಯಾರು ಸ್ಪಂದಿಸುತ್ತಿಲ್ಲ, ಮರಳಿ ಅವರನ್ನು ಕೆಲಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ದೂರಿ ನೈರ್ಮಲ್ಯ ನಿರೀಕ್ಷ ಹಿರೇಮಠ ಅವರಿದ್ದ ಸ್ಥಳಕ್ಕೆ ಹೋಗಿದ್ದಾರೆ. ಆಗ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.