ಬೈಲಹೊಂಗಲದಲ್ಲಿ ಕರವೇ ಪ್ರತಿಭಟನೆ

web3
Published on

ಬೈಲಹೊಂಗಲ: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ 29 ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಬಂಧನ ಖಂಡಿಸಿ ಕರವೇ ಕಾರ್ಯಕರ್ತರು ಪಟ್ಟಣದ ಬಸ್ ನಿಲ್ದಾಣದ ಎದುರು ರಸ್ತೆ ತಡೆದು ಈಚೆಗೆ ಪ್ರತಿಭಟಿಸಿದರು.

ಕರವೇ ಜಿಲ್ಲಾ ಸಂಚಾಲಕ ಶಿವಾನಂದ ಕೋಲಕಾರ, ನಗರ ಘಟಕ ಅಧ್ಯಕ್ಷ ಶಿವಾನಂದ ಕುರಬೇಟ ಮಾತನಾಡಿ, ಆಂಗ್ಲ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸುವಂತೆ ದಿಟ್ಟ ಹೋರಾಟ ಮಾಡಿದ ಕರವೇ ಕಾರ್ಯಕರ್ತರನ್ನು ಬಂಧಿಸಿದ್ದು ಖಂಡನೀಯ. ಕೂಡಲೇ ಎಲ್ಲರನ್ನೂ ಬಿಡುಗಡೆಗೊಳಿಸಬೇಕು.

ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ಹೊರಹಾಕಿದರು. ಕಿರಣ ಬೆಳಗಾವಿಮಠ, ಸೋಮು ತೋಟಗಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net