ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಏಡ್ಸ್ ಜಾಗೃತಿ

AIDS
Published on

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಗಳ ಆಶ್ರಯದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ಶುಕ್ರವಾರ ಜರುಗಿತು.

ಪ್ರಾಚಾರ್ಯ ಸಂಗಮೇಶ ಹೂಗಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹಲವು ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದದ ಸಂಗತಿಯಾಗಿದೆ. ಇದರಿಂದ ಹಲವು ರೋಗಗಳು ಅಂಟಿಕೊಂಡು ಪ್ರೌಢ ವಯಸ್ಸಿನಲ್ಲಿ ಮರಣ ಹೊಂದುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಸಂಸ್ಥೆಯ ಆಡಳಿತಾಧಿಕಾರಿ ಪ್ರಕಾಶ ಗರಗಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಬಾಳಬೇಕು ಎಂದರು. ಎನ್‌ಎಸ್‌ಎಸ್ ಅಧಿಕಾರಿ ಎಸ್ ಬಿ.ಮನ್ನಿಕೇರಿ ಮಾತನಾಡಿ, ಅಂಟು ರೋಗಗಳಿಂದ ಯುವಕರು ಎಚ್ಚರ ವಹಿಸಲು ಸೂಚನೆ ನೀಡಿದರು.

ಶಿಕ್ಷಕ ಗುರು ಖಡಕಭಾವಿ ಮಾತನಾಡಿದರು. ಉಪನ್ಯಾಸಕಿ ವಿದ್ಯಾ ಬಡಿಗೇರ, ಯಲ್ಲಾಲಿಂಗ ಮರ್ದಿ, ಜ್ಞಾನೇಶ್ವರ ಮಲ್ಲಾಪುರ, ಉಪನ್ಯಾಸಕಿ ಶ್ಯಾಹಿಲ್ ಲಂಗೋಟಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net