ಬಿಮ್ಸ್ ಆಸ್ಪತ್ರೆಯಲ್ಲಿ ತಜ್ಞವೈದ್ಯರ ಕೊರತೆ

BIMS Hospital Belagavi 5 MAY 20
Published on

ಬೆಳಗಾವಿ: ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಶಿಶುಗಳ ಸಾವಿನ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಗರ್ಭದಲ್ಲಿಯೇ ಶಿಶು ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಗರ್ಭಿಣಿಯನ್ನು ಬಿಮ್ಸ್ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಗೋಕಾಕ ತಾಲೂಕಿನ ಮೇಲಮಟ್ಟಿ ಗ್ರಾಮದ ರಾಧಿಕಾ ಮಲ್ಲೇಶ ಗಡ್ಡಿಹೊಳಿ (20) ಬಾಣಂತಿ. ಡಿ.29ರಂದು ಗರ್ಭದಲ್ಲಿಯೇ ಮಗು ಮೃತಪಟ್ಟಿದ್ದರಿಂದ ಕುಟುಂಬಸ್ಥರು ಗೋಕಾಕ, ಬೆಳಗಾವಿಯಲ್ಲಿರುವ ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಈ ಕಾರಣದಿಂದ ಗರ್ಭಿಣಿ ಸ್ಥಿತಿ ಗಂಭೀರವಾಗಿದ್ದು ಕೊನೆಗಳಿಗೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ನರರೋಗಗಳ ಸಮಸ್ಯೆಯಿಂದ ಬಳಲುತ್ತಿದ್ದ ಗರ್ಭಿಣಿ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ಸ್ಥಳಾಂತರಿಸಲಾಗಿದೆ.

ಗರ್ಭಿಣಿಯನ್ನು ಭಾನುವಾರ ಕುಟುಂಬಸ್ಥರು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರೆ ಚಿಕಿತ್ಸೆ ನೀಡಿ ಮಗು ಉಳಿಸಬಹುದಿತ್ತು. ಆದರೆ, ಎಲ್ಲ ಆಸ್ಪತ್ರೆಗಳಿಗೆ ಅಲೆದಾಡಿ ಗರ್ಭದಲ್ಲಿಯೇ ಮಗು ಮೃತಪಟ್ಟ ಬಳಿಕ ಕೊನೆಗಳಿಗೆಯಲ್ಲಿ ಬಿಮ್ಸ್ ನಲ್ಲಿ ದಾಖಲಿಸಿದ್ದರೂ, ತಕ್ಷಣ ಚಿಕಿತ್ಸೆ ನೀಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net