ಕಾಖಂಡಕಿಯಲ್ಲಿ ನಾಲವಾರ ಶ್ರೀಗಳ ತುಲಾಭಾರ ಅ.29ಕ್ಕೆ

3 9 Nalwar 1
Published on

ಯಡ್ರಾಮಿ: ಕಾಖಂಡಕಿಯ ಸದ್ಗುರು ಶ್ರೀ ಮಲ್ಲಾರಾಧ್ಯರು, ಶ್ರೀ ಕೋರಿಸಿದ್ಧೇಶ್ವರ ಸಿದ್ಧ ಸಂಸ್ಥಾನ ಮಠದಲ್ಲಿ ಭಾನುವಾರ ರಾತ್ರಿ 8ಗಂಟೆಗೆ ನಾಲವಾರದ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯರ 59ನೇ ಜನ್ಮದಿನೋತ್ಸವ ಹಾಗೂ ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠ ತಿಳಿಸಿದೆ.

ಬೆಳಗ್ಗೆ ಗುರುಗಳ ಕರ್ತೃ ಗದ್ದುಗೆಗೆ ವಿಶೇಷ ಪೂಜೆ, ಅಲಂಕಾರ, ಅಭಿಷೇಕ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ. ಸಂಜೆ 6ಕ್ಕೆ ಅದ್ದೂರಿ ಮೆರವಣಿಗೆ ಮೂಲಕ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯರನ್ನು ಸ್ವಾಗತಿಸಲಾಗುವುದು. ಬಳಿಕ ಶ್ರೀಮಠದ ಆವರಣದಲ್ಲಿನ ವೇದಿಕೆಯಲ್ಲಿ ಶ್ರೀಗಳಿಗೆ ಭಕ್ತರಿಂದ ತುಲಾಭಾರ ನೆರವೇರಿಸಿ ಭಕ್ತಿ ಸಮರ್ಪಿಸಲಾಗುವುದು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗುರುಗಳ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು ಎಂದು ಪ್ರಕಟಣೆಯಲ್ಲಿ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net