

ಕೂಡ್ಲಿಗಿ: ಸ್ವಾತಂತ್ರ್ಯ ದಿನಾಚರಣೆಯನ್ನು ಎಲ್ಲರೂ ಹಬ್ಬದಂತೆ ಸಂಭ್ರಮದಿಂದ ಆಚರಿಸಬೇಕು ಎಂದು ತಹಸೀಲ್ದಾರ್ ಎಂ.ರೇಣುಕಾ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
.14ರಂದು ಪಟ್ಟಣದ ಎಲ್ಲ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ದೀಪದ ಅಲಂಕಾರ ಮಾಡಬೇಕು. ಆ.15ರಂದು ಬೆಳಗ್ಗೆ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಪುಷ್ಪ ನಮನ ಸಲ್ಲಿಸುವರು. ನಂತರ ಧ್ವಜಾರೋಹಣ ನಡೆಸಿ, ಆರಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಧ್ವಜವಂದನೆ ಸ್ವೀಕಾರ ಮಾಡುವರು.
ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ತಿಳಿಸಿದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ, ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಪಪೂ ಕಾಲೇಜಿನ ಪ್ರಾಚಾರ್ಯೆ ಟಿ.ಕೊತ್ಲಮ್ಮ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್, ಸಿಪಿಐ ಸುರೇಶ್ ತಳವಾರ, ನಿವೃತ್ತ ಶಿಕ್ಷಕ ಸಿದ್ದಪ್ಪ ಇತರರಿದ್ದರು.