

ಮಂಗಳೂರು: ವಿದ್ಯಾರ್ಥಿಗಳ ಸಮಗ್ರ ಯಶಸ್ಸಿನ ಹಿಂದೆ ವಿದ್ಯಾಸಂಸ್ಥೆಗಳ ಪಾತ್ರ ಬಹುಮುಖ್ಯ. ಅದೇ ರೀತಿ ಹಳೇ ವಿದ್ಯಾರ್ಥಿಗಳು ಸಹ ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಪೂರಕ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ, ನಿವೃತ್ತ ಯೋಧ ಕ್ಯಾ.ಬೃಜೇಶ್ ಚೌಟ ಹೇಳಿದರು.
ಬಂಟ್ಸ್‌ಹಾಸ್ಟೆಲ್‌ನ ಶ್ರೀ ರಾಮಕೃಷ್ಣ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಮ್ಮಿಲನ ‘ಮರಳಿ ಕಾಲೇಜಿಗೆ’ ಎಂಬ ವಿನೂತನ ಕಾರ್ಯಕ್ರಮ ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು.
ಹಳೇ ವಿದ್ಯಾರ್ಥಿಗಳ ಸಮೂಹವೇ ವಿದ್ಯಾಸಂಸ್ಥೆಗಳ ಶಕ್ತಿ. ವಿದ್ಯಾರ್ಥಿಗಳು ಅಶಕ್ತರಾದವರನ್ನು ಶಕ್ತರನ್ನಾಗಿಸಿ ಭಾರತೀಯ ಸಂಸ್ಕಾರ, ಸಂಸ್ಕೃತಿಯನ್ನು ಮರುಜೋಡಿಸಿ ದೇಶ ಕಟ್ಟುವ ಕೆಲಸ ಮಾಡಬೇಕಾಗಿದೆ ಎಂದರು.
ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಸಿ.ಎ ಶಾಂತಾರಾಮ ಶೆಟ್ಟಿ ಶುಭ ಹಾರೈಸಿದರು. ಪ್ರಾಂಶುಪಾಲ ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅಕ್ಷರ ಟ್ರಸ್ಟ್ ಕಾರ್ಯದರ್ಶಿ ದೇವಿಪ್ರಸಾದ್, ಕಾರ್ಯಕ್ರಮ ಸಂಯೋಜಕಿ ಪ್ರೊ.ಶ್ವೇತಾ ಎಚ್.ಪೆರೋಡಿ ಮತ್ತು ಪ್ರೊ.ಭವ್ಯಾ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಜ್ವಲ್ ಶೆಟ್ಟಿ, ಕಾರ್ಯದರ್ಶಿ ಆಕರ್ಶ್ ಕೆ.ಎಸ್ ಉಪಸ್ಥಿತರಿದ್ದರು.
ಹಳೇ ವಿದ್ಯಾರ್ಥಿ ಆರ್.ಜೆ ಮನೋಜ್ ಕಾರ್ಯಕ್ರಮ ನಿರೂಪಿಸಿದರು. ಪ್ರೊ.ಪ್ರತಿಮಾ ಶೆಟ್ಟಿ ಪರಿಚಯಿಸಿದರು. ಸಮಾರಂಭದ ಕೊನೆಯಲ್ಲಿ ಹಳೇ ವಿದ್ಯಾರ್ಥಿಗಳಿಗೆ ವಿಶೇಷ ಲಘು ಆಟೋಟಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ವ್ಯಕ್ತಿತ್ವ ರೂಪುಗೊಳ್ಳುವುದು ಕಾಲೇಜಿನ ಮಣ್ಣಿನ ಗುಣ. ಹಳೇ ವಿದ್ಯಾರ್ಥಿಗಳು ಕಾಲೇಜಿನಿಂದ ಬಂಧಮುಕ್ತರಾಗಲು ಸಾಧ್ಯವಿಲ್ಲ. ವಿದ್ಯೆ ಕಲಿತ ಪರಿಸರ ಮತ್ತೆ ನಮ್ಮನ್ನು ಒಂದುಗೂಡಿಸುವ ಸಂದರ್ಭ ಅತಿ ಉತ್ಸಾಹಭರಿತವಾದದ್ದು. ವಿದ್ಯೆ ಎನ್ನುವುದು ಅತಿ ಮುಖ್ಯ. ಅದರೊಂದಿಗೆ ಸಮಾಜದಲ್ಲಿ ಆರೋಗ್ಯ ಮತ್ತು ಭಾರತೀಯ ಸಂಸ್ಕೃತಿಯ ಉಳಿವಿಗೆ ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯ.
ಸಿ.ಎ ಶಾಂತಾರಾಮ ಶೆಟ್ಟಿ, ರೆಡ್‌ಕ್ರಾಸ್ ಸಂಸ್ಥೆ ದ.ಕ. ಜಿಲ್ಲಾಧ್ಯಕ್ಷ