ರಾಜ್ಯಮಟ್ಟಕ್ಕೆ ವಿದ್ಯಾರ್ಥಿಗಳು ಆಯ್ಕೆ

12..14
ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೆಎಲ್‌ಇ ಸಂಸ್ಥೆಯ ಯಡ್ರಾಂವ ಗ್ರಾಮದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ ಸನ್ಮಾನಿಸಲಾಯಿತು.
Published on

ಮಾಂಜರಿ: ಸಮೀಪದ ಯಡ್ರಾಂವ ಗ್ರಾಮದ ಕೆಎಲ್‌ಇ ಸಂಸ್ಥೆಯ ಕನ್ನಡ ಮಾಧ್ಯಮ ಶಾಲೆ ವಿದ್ಯಾರ್ಥಿಗಳು 2023-24 ನೇ ಸಾಲಿನ ಚಿಕ್ಕೋಡಿ ಜಿಲ್ಲಾಮಟ್ಟದ ಕ್ರೀಡೆಯಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ವಿಭಾಗದಲ್ಲಿ ಜ್ಯೋತಿ ಹೊನ್ನಪ್ಪ ಮಾಳಿ (ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ), ನಕುಲ ಉಮೇಶ ಕೆಂಚೆ (ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ) ಪಡೆದಿದ್ದಾರೆ. ಪ್ರೌಢ ವಿಭಾಗದಲ್ಲಿ ಹೇಮಾ ಪ್ರಕಾಶ ಬೆಳಸೆ (ಎತ್ತರ ಜಿಗಿತ), ಸವಿತಾ ರಾಜು ನಿಪ್ಪಾಣಿ (ಉದ್ದ ಜಿಗಿತ) ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಸತ್ಯಪ್ಪ ಬಿಷ್ಠೆ ಮತ್ತು ಎಂ.ವಿ.ನಿಗದಿ, ಎಸ್.ಜಿ.ಕಾಂಬಳೆ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net