

ಬೇಲೂರು: ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪೂರ್ಣಪ್ರಜ್ಞ ಶಾಲೆಯ ವಿದ್ಯಾರ್ಥಿ ವೈ.ಆರ್.ಅಥರ್ವ ವೇಗದ ಓಟಗಾರ ಪ್ರಶಸ್ತಿ ಮುಡಿಗೇರಿಸಿಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬೇಲೂರು ತಾಲೂಕಿನ ಐದು ಹೋಬಳಿಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳ ಪೈಕಿ ತಾಲೂಕು ಮಟ್ಟದ ಹಿರಿಯ ಪ್ರಾಥಾಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಪಟ್ಟಣದ ಪೂರ್ಣಪ್ರಜ್ಞ ಶಾಲೆಯ ವಿದ್ಯಾರ್ಥಿ ವೈ.ಆರ್.ಅಥರ್ವ, 100 ಮೀಟರ್ ಓಟ ಪ್ರಥಮ, 200 ಮೀಟರ್ ಓಟ ಪ್ರಥಮ, 400 ಮೀಟರ್ ಓಟ ಪ್ರಥಮ ಹಾಗೂ 4*100 ಮೀಟರ್ ಓಟದಲ್ಲಿಯೂ ಪ್ರಥಮ ಸ್ಥಾನ ಗಳಿಸುವ ಮೂಲಕ ವೈಯಕ್ತಿಕವಾಗಿ ತಾಲೂಕು ಚಾಂಪಿಯನ್ ಆಗುವ ಮೂಲಕ ವೇಗದ ಓಟಗಾರ ಪ್ರಶಸ್ತಿ ಮುಡಿಗೇರಿಸಿ ಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ದೈಹಿಕ ಶಿಕ್ಷಣ ಪರಿವೀಕ್ಷಕ ಜಗದೀಶ್, ಶಾಲಾ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಜತೆಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್, ಮಂಜುನಾಥ್ ಅಭಿನಂದನೆ ಸಲ್ಲಿಸಿದರು.