ಅತ್ತಾವರ ಸರೋಜಿನಿ ಮಧುಸೂದನ ಕುಶೆ ಶಾಲೆಯಲ್ಲಿ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ

mng--2 June sahithya abhiruchi
Published on


ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಹಾಗೂ ಸರೋಜಿನಿ ಮಧುಸೂದನ ಕುಶೆ ಶಾಲೆ ಇವರ ಜಂಟಿ ಆಶ್ರಯದಲ್ಲಿ 2024-25 ಸಾಲಿನ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಶನಿವಾರ ಅತ್ತಾವರದಲ್ಲಿ ಜರುಗಿತು.


ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ.ಧರ್ಮದರ್ಶಿ ಹರಿಕೃಷ್ಣ ಪುನರೂರು ಉದ್ಘಾಟಿಸಿದರು. 2024-25 ಸಾಲಿನ ಸಾಹಿತ್ಯ ಅಭಿರುಚಿ 101 ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಶ್ರೀನಾಥ ಎಂ.ಪಿ. ಚಾಲನೆ ನೀಡಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಪ್ರಾಧ್ಯಾಪಕಿ ಪ್ರೊ. ಡಾ. ಮೀನಾಕ್ಷಿ ರಾಮಚಂದ್ರ, ಸೈಂಟ್ ಆ್ಯನ್ಸ್ ಡಿ.ಎಡ್ ಕಾಲೇಜು ಗೌರವ ಉಪನ್ಯಾಸಕ ವ.ಉಮೇಶ್ ಕಾರಂತ, ಜೆಪ್ಪು ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ, ಅತ್ತಾವರ ನಗರ ನಿವಾಸಿಗಳ ಸಂಘದ ಅಧ್ಯಕ್ಷ ಉಮೇಶ್ ರಾವ್ ಕುಂಬ್ಳೆ ಉಪಸ್ಥಿತರಿದ್ದರು.


ಸರೋಜಿನಿ ಮಧುಸೂದನ ಕುಶೆ ಶಾಲೆ ಪ್ರಾಂಶುಪಾಲ ಬಿಂದುಸಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಸುರೇಖಾ ಯಾಳವಾರ, ಅಮೃತಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು, ಡಾ.ಅರುಣಾ ನಾಗರಾಜ ಜೊತೆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net