

ತುಮಕೂರು: ಮುಂದಿನ ಪ್ಯಾರಿಸ್ ಒಲಂಪಿಕ್ ಕ್ರೀಡಾಕೂಟದಲ್ಲಿ ಪದಕ ವಿಜೇತ ಸಾಮರ್ಥ್ಯವುಳ್ಳ 75 ಕ್ರೀಡಾಪಟುಗಳಲ್ಲಿ ತುಮಕೂರಿನ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ ಅಥ್ಲೀಟ್ ಎಂ.ಕ್ರಿಷಿಕ್ ಕೂಡ ಇದ್ದಾರೆ. ಒಲಿಂಪಿಕ್ಸ್‌ನಲ್ಲಿ ಪದಕ ಸಾಧನೆ ಹಿನ್ನೆಲೆಯಲ್ಲಿ ಹೆಚ್ಚಿನ ತರಬೇತಿ ಹಾಗೂ ಅಭ್ಯಾಸಕ್ಕೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 10 ಲಕ್ಷ ರೂಪಾಯಿ ಪೋತ್ಸಾಹಧನವನ್ನು ನೀಡಿದೆ.
ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ಆ್ಯಂಡ್ ಇನ್‌ಸ್ಟ್ರುಮೆಂಟೇಶನ್ ವಿಭಾಗದಲ್ಲಿ ಓದುತ್ತಿರುವ ಕ್ರಿಷಿಕ್ 110 ಮೀ., ಹರ್ಡಲ್ಸ್ ನಲ್ಲಿ ಉತ್ತಮ ಸಾಧನೆ ತೋರಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವ ಸಾಮರ್ಥ್ಯ ಹೊಂದಿದ್ದಾರೆ. ಕ್ರಿಷಿಕ್‌ಗೆ ಎಸ್‌ಐಟಿ ನಿರ್ದೇಶಕ ಡಾ. ಎಂ.ಎನ್. ಚನ್ನಬಸಪ್ಪ, ಸಿಇಒ ಡಾ.ಶಿವಕುಮಾರಯ್ಯ, ಪ್ರಾಂಶುಪಾಲ ಪ್ರೊ.ಎಸ್.ವಿ.ದಿನೇಶ್, ಎಚ್.ಕೆ.ಇ.ಲತಾ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಠ ಡಿ.ಎಸ್ ಯೋಗೀಶ್ ಅಭಿನಂದಿಸಿದ್ದಾರೆ.