ಕ್ರೀಡಾಪಟುಗಳಿಗೆ ಪ್ರೋತ್ಸಾಹ ಅಗತ್ಯ

15SPT1
ಸೋಮವಾರಪೇಟೆ ತಾಲೂಕಿನ ಮಾದಾಪುರ ಡಿ.ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಚಾಲನೆ ನೀಡಿದರು. ಅಪ್ಪಚ್ಚು ರಂಜನ್, ಸಿ.ಜಿ.ಮಂದಪ್ಪ ಇದ್ದರು.
Published on

ಸೋಮವಾರಪೇಟೆ: ಜಿಲ್ಲೆಯಲ್ಲಿ ಪ್ರತಿಭಾವಂತ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರಿಗೆ ಸೂಕ್ತ ಪ್ರೋತ್ಸಾಹ ಮತ್ತು ಅವಕಾಶ ದೊರಕಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಆಶಿಸಿದರು.

ತಾಲೂಕಿನ ಮಾದಾಪುರ ಡಿ.ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿ ಪಾಠ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಮುಂದೆ ಇರುತ್ತಾರೆ. ಆದರೆ ಅವರಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆ ಎಂಬುದನ್ನು ಪಾಲಕರು ಮತ್ತು ವಿದ್ಯಾರ್ಥಿಗಳು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕೆಂದರು.

ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಪಾಲ್ಗೊಳ್ಳವುದು ಮುಖ್ಯ. ಕ್ರೀಡಾಪಟುಗಳು ಸಮಯ ಪರಿಪಾಲನೆ, ನಿರ್ದಿಷ್ಟ ಗುರಿ ಮತ್ತು ಏಕಾಗ್ರತೆಯನ್ನು ಬೆಳೆಸಿಕೊಂಡರೆ ಮಾತ್ರ ಉತ್ತಮ ಕ್ರೀಡಾಪಟು ಆಗಲು ಸಾಧ್ಯ ಎಂದರು.

ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕರ್ನಲ್ ಬಿ.ಜಿ.ವಿ.ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಸಿ.ಜಿ.ಮಂದಪ್ಪ, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ದೇವಕ್ಕಿ, ಪದವಿಪೂರ್ವ ಕಾಲೇಜು ಉಪನಿರ್ದೇಶಕ ಪುಟ್ಟರಾಜು, ಆಡಳಿತ ಮಂಡಳಿ ಸದಸ್ಯರಾದ ಬೋಜಮ್ಮ, ನಾಣಿಯಪ್ಪ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net