ಎಟಿಎಂ ಕಾರ್ಡ್ ಬದಲಾಯಿಸಿ 44 ಸಾವಿರ ರೂ. ದೋಚಿದ ಅಪರಿಚಿತ

Crime Logo
Published on

ಸವಣೂರ: ಎಟಿಎಂನಿಂದ ಹಣ ತೆಗೆದುಕೊಡುವ ನೆಪದಲ್ಲಿ ವ್ಯಕ್ತಿಯೊಬ್ಬನ ಖಾತೆಯಿಂದ 44 ಸಾವಿರ ರೂ. ದೋಚಿದ ಘಟನೆ ಪಟ್ಟಣದ ಕರ್ನಾಟಕ ಬ್ಯಾಂಕ್ ಎಟಿಎಂನಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಮಂತ್ರೋಡಿ ಗ್ರಾಮದ ಹಜರೇಸಾಬ ಖಾದರಸಾಬ ಕೆಂಗಾಪುರ (32) ಮೋಸ ಹೋದವರು.
ಈತ ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಹೋದ ಸಮಯದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸಹಾಯ ಮಾಡುವ ನೆಪದಲ್ಲಿ ಈತನ ಎಟಿಎಂ ಕಾರ್ಡ್ ಬದಲಿಸಿ 44 ಸಾವಿರ ರೂ. ಹಣ ಡ್ರಾ ಮಾಡಿಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net