

ಕೆ.ಎಂ.ದೊಡ್ಡಿ: ಹನುಮಂತನಗರದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ಆತ್ಮಲಿಂಗೇಶ್ವರ ರಥೋತ್ಸವವು ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಶ್ರೀ ಆತ್ಮಲಿಂಗೇಶ್ವರ ಧರ್ಮದರ್ಶಿ ಮಂಡಳಿ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರು ಶ್ರೀ ಆತ್ಮಲಿಂಗೇಶ್ವರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದರು. ಬಳಿಕ ಭಾರತೀ ಎಜುಕೇಷನ್ ಟ್ರಸ್ಟ್ ಕಾರ್ಯನಿರ್ವಾಹಕ ಟ್ರಸ್ಟಿ ಆಶಯ್ ಮಧು ರಥೋತ್ಸವಕ್ಕೆ ಚಾಲನೆ ನೀಡಿದರು.
ಮಧು ಜಿ.ಮಾದೇಗೌಡ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಸಹ ರಥೋತ್ಸವಕ್ಕೆ ಚಾಲನೆ ನೀಡಲಾಗಿದೆ. ರಥೋತ್ಸವಕ್ಕೆ ಸುತ್ತಮುತ್ತಲ ಗ್ರಾಮದ ಭಕ್ತಾದಿಗಳು ಭಾಗವಹಿಸಿ ರಥವನ್ನು ಎಳೆಯುವ ಮೂಲಕ ಯಶಸ್ವಿಗೊಳಿಸಿದ್ದಾರೆ. ಈ ಬಾರಿ ಉತ್ತಮ ಮಳೆಯಾಗಿ ರೈತರು ಸಮೃದ್ಧಿಯಾಗಿ ಬೆಳೆ ಬೆಳೆಯಲಿ ಎಂದು ಪ್ರಾರ್ಥಿಸಿದರು.
ರಥೋತ್ಸವದಲ್ಲಿ ವೀರಗಾಸೆ, ಪೂಜಾ ಕುಣಿತ ತಂಡ ಕಲಾ ಪ್ರದರ್ಶನದೊಂದಿಗೆ ನೋಡುಗರ ಗಮನ ಸೆಳೆಯಿತು.