ಎಟಿಎನ್‌ಸಿಸಿ ಕಾಲೇಜಿಗೆ ಐಕ್ಯತಾ ಉತ್ಸವ ಗರಿ

8 smg 10
Published on

ಶಿವಮೊಗ್ಗ: ನಗರದ ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ ಎಂಬಿಎ ವಿಭಾಗ ಸ್ವಾತಂತ್ರೃದ ಅಮೃತ ಮಹೋತ್ಸವ ನಿಮಿತ್ತ ಸೋಮವಾರ ಆಯೋಜಿಸಿದ್ದ ಅಂತರ ಕಾಲೇಜುಗಳ ಐಕ್ಯತಾ ಉತ್ಸವದಲ್ಲಿ ಎಟಿಎನ್‌ಸಿಸಿ (ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು) ಚಾಂಪಿಯನ್ ಆಗಿ ಹೊರಹೊಮ್ಮಿತು.

ಸಾಗರ ರಸ್ತೆಯ ಪೆಸಿಟ್ ಕಾಲೇಜಿನ ಎಂಬಿಎ ಸೆಮಿನಾರ್ ಸಭಾಂಗಣದಲ್ಲಿ ನಡೆದ ಐಕ್ಯತಾ ಉತ್ಸವದಲ್ಲಿ ದಾವಣಗೆರೆ ಜಿಲ್ಲೆ ಹೊನ್ನಳ್ಳಿ ಸೇರಿದಂತೆ 22 ಸರ್ಕಾರಿ ಮತ್ತು ಖಾಸಗಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಉತ್ಸವದಲ್ಲಿ ಹಣಕಾಸು, ಮಾರುಕಟ್ಟೆ, ವ್ಯಾಪಾರ-ವಹಿವಾಟು, ರಸಪ್ರಶ್ನೆ, ಪ್ರಬಂಧ ಸೇರಿದಂತೆ ಐದು ವಿಭಾಗದಲ್ಲಿ ಸ್ಪರ್ಧೆಗಳನ್ನು ನಡೆಸಲಾಯಿತು. ಹೆಚ್ಚು ಸ್ಪರ್ಧೆಗಳಲ್ಲಿ ವಿಜೇತರಾದ ಎಟಿಎನ್‌ಸಿಸಿ ಕಾಲೇಜಿನ ವಿದ್ಯಾರ್ಥಿಗಳು ಚಾಂಪಿಯನ್‌ಪಟ್ಟ ಅಲಂಕರಿಸಿದರು.

ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರನ್ನರ್ ಅಪ್‌ಗೆ ತೃಪ್ತಿಪಟ್ಟಿಕೊಂಡಿತು. ಪೆಸಿಟ್ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವಿ.ಚೈತನ್ಯಕುಮಾರ್, ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ್, ಸಹ ಪ್ರಾಧ್ಯಾಪಕ ಸುನೀಲ್ ಕುಮಾರ್ ಉದ್ಘಾಟನಾ ಸಮಾರಂಭದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net