Atrocities against Sc & St ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಲ್ಕು ವರ್ಷದಲ್ಲಿ 122 ಪ್ರಕರಣ ದಾಖಲು

Atrocities against Sc & St
Published on

ಕಾರವಾರ: ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪಂಗಡದವರ ಮೆಲೆ ನಡೆಯುವ ದೌರ್ಜನ್ಯ (Atrocities against Sc & St )ಪ್ರಕರಣಗಳ ಕುರಿತಂತೆ ಸಮರ್ಪಕ ರೀತಿಯಲ್ಲಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಗುರುವಾರ  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ.ಜಾತಿ ಮತ್ತು ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ Atrocities against Sc & St ಕುರಿತಂತೆ ವಿವರವಾದ ಮಾಹಿತಿಯನ್ನು ಸಂಗ್ರಹಿಸಿ, ದೌರ್ಜನ್ಯಕ್ಕೆ ಒಳಗಾದವರಿಗೆ ಸೂಕ್ತ ನ್ಯಾಯ ಒದಗಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಯಲ್ಲಿ ದಾಖಲಾಗುವ ಪ್ರಕರಣಗಳ ಬಗ್ಗೆ ಸೂಕ್ತ ತನಿಖೆ ನಡೆಸಿ, ಛಾರ್ಜ್ಶೀಟ್ ಸಲ್ಲಿಸುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಪೌರ ಕಾರ್ಮಿಕ ಹುದ್ದೆಗೆ ನೇಮಕವಾದ ಎಲ್ಲರನ್ನೂ ಪೌರ ಕಾರ್ಮಿಕ ಕೆಲಸಗಳಿಗೆ ಬಳಸಬೇಕು, ಅವರಲ್ಲಿ ಕೆಲವರನ್ನು ಪೌರ ಕಾರ್ಮಿಕ ಕೆಲಸಗಳಿಗೆ ಬದಲಾಗಿ ಇತರೇ ಬಳಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಎಲ್ಲಾ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ಪರಿಶೀಲಿಸಿ, ಲಿಖಿತವಾಗಿ ವರದಿಯನ್ನು ನೀಡುವಂತೆ ಸೂಚಿಸಿದರು. ಕ್ರಿಮ್ಸ್ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿತರಿಸಿರುವ ಲ್ಯಾಪ್‌ಟಾಪ್‌ಗಳ ಗುಣಮಟ್ಟದ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಪರಿಶೀಲಿಸಿ, ಗುಣಮಟ್ಟದಲ್ಲಿ ಲೋಪವಿದ್ದಲ್ಲಿ ಈ ಲ್ಯಾಪ್‌ಟಾಪ್ ಸರಬರಾಜು ಮಾಡಿರುವ ಸಂಸ್ಥೆಯಿಂದ ಹೊಸ ಲ್ಯಾಪ್‌ಟಾಪ್ ವಿತರಣೆಗೆ ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಾಲೇಜು ಆರಂಭದಲ್ಲಿಯೇ ಕಲಿಕಾ ಉಪಕರಣಗಳನ್ನು ನೀಡುವಂತೆ ಮತ್ತು ವಿದ್ಯಾರ್ಥಿ ವೇತನ ವಿತರಣೆಯಲ್ಲಿ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು ಎಂದರು. ಜಿಲ್ಲೆಯಲ್ಲಿನ ಎಸ್.ಸಿ. ಎಸ್.ಟಿ ಸ್ಮಶಾನ ಭೂಮಿಗಳು ಒತ್ತುವರಿಯಾಗದಂತೆ ಎಚ್ಚರಿಕೆ ವಹಿಸಿ  ಅವುಗಳಿಗೆ ಕಾಂಪೌಂಡ್ ನಿರ್ಮಾಣ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಎಲ್ಲಾ ಇಲಾಖೆಗಳಲ್ಲಿ ಪ.ಜಾತಿ ಮತ್ತು ಪಂಗಡದ ಶ್ರೇಯೋಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಬಳಕೆ ಮಾಡುವಂತೆ ಹಾಗೂ ಸಿದ್ದಿ ಜನಾಂಗದವರಿಗೆ ವಿತರಿಸಲಾಗುವ ಪೌಷ್ಠಿಕ ಆಹಾರವನ್ನು ಆಯಾ ತಿಂಗಳಿನಲ್ಲಿಯೇ ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

Atrocities against Sc & St 122 ಪ್ರಕರಣ ದಾಖಲು

ಜಿಲ್ಲೆಯಲ್ಲಿ 2022 ರಿಂದ ಇದುವರೆಗೆ 122 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 88 ಪ್ರಕರಣಗಳಲ್ಲಿ ಛಾರ್ಜ್ಶೀಟ್ ಸಲ್ಲಿಕೆಯಾಗಿದೆ. Atrocities against Sc & St ಸಂಬಂಧ  198 ಲಕ್ಷ ರೂ ಪರಿಹಾರ ಧನ ವಿತರಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಮಾಹಿತಿ ನೀಡಿದರು.

ಸಭೆಯಲ್ಲಿ ಸರ್ಕಾರಿ ಅಭಿಯೋಜಕಿ ಸುನಿತಾ ನಾಗೇಕರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಕ್ರಿಮ್ಸ್ನ ಡೀನ್ ಡಾ.ಪೂರ್ಣಿಮಾ, ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ದೀಪಕ್ ಕುಡಾಳಕರ್, ಯಮುನಾ ಗಾಂವಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net