ದೌರ್ಜನ್ಯ ಪ್ರಕರಣಗಳಿಗೆ 1.30 ಕೋಟಿ ರೂ. ಪರಿಹಾರ

05-10-Shiva-2
ರಾಯಚೂರಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಕಾರಿ ಚಂದ್ರಶೇಖರ ನಾಯಕ ಅಧ್ಯಕ್ಷತೆಯಲ್ಲಿ ಗುರುವಾರ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಎಸ್ಪಿ ಬಿ.ನಿಖಿಲ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ನಗರಸಭೆ ಪೌರಾಯುಕ್ತ ಗುರುಸಿದ್ಧಯ್ಯ ಹಿರೇಮಠ, ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಅಕಾರಿ ರಾಜೇಂದ್ರ ಜಲ್ದಾರ್ ಇದ್ದರು.
Published on

ರಾಯಚೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಪ್ರಕರಣಗಳಲ್ಲಿ ಒಟ್ಟು 1.30 ಕೋಟಿ ರೂ. ಪರಿಹಾರ ನೀಡಲಾಗಿದ್ದು, ಜನವರಿಯಿಂದ ಸೆಪ್ಟೆಂಬರ್ ಅಂತ್ಯದವರೆಗೆ ಒಟ್ಟು 63 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಕಾರಿ ಚಂದ್ರಶೇಖರ ನಾಯಕ ತಿಳಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಟ್ಟು 52 ಜಾತಿ ನಿಂದನೆ, ಬೆದರಿಕೆ ಪ್ರಕರಣ, 5 ಅತ್ಯಾಚಾರ ಪ್ರಕರಣ, 6 ಸಾವಿನ ಪ್ರಕರಣಗಳು ದಾಖಲಾಗಿವೆ ಎಂದರು.
ಪ್ರಕರಣಗಳಲ್ಲಿ ಮೃತ ವ್ಯಕ್ತಿಯ ಕುಟುಂಬದ ಎಂಟು ಜನರಿಗೆ ಪಿಂಚಣಿ ಮಂಜೂರು ಮಾಡಲಾಗಿದೆ. ತಲಾ 6,750 ರೂ.ಗಳಂತೆ ಒಟ್ಟು 54 ಸಾವಿರ ರೂ. ಮಂಜೂರು ಮಾಡಲಾಗಿದೆ. ಮೃತಪಟ್ಟ ಪ್ರಕರಣಗಳಲಿ ಸರ್ಕಾರಿ ಉದ್ಯೋಗ ನೀಡಲು 7 ಅರ್ಜಿ ಸಲ್ಲಿಕೆಯಾಗಿವೆ ಎಂದು ಚಂದ್ರಶೇಖರ ನಾಯಕ ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಎಸ್ಪಿ ಬಿ.ನಿಖಿಲ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ನಗರಸಭೆ ಪೌರಾಯುಕ್ತ ಗುರುಸಿದ್ಧಯ್ಯ ಹಿರೇಮಠ, ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಅಕಾರಿ ರಾಜೇಂದ್ರ ಜಲ್ದಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net