ಸಮ್ಮೋಹನ ವಿದ್ಯೆ ಹೆಸರಲ್ಲಿ ಹಲ್ಲೆ

man thrashed
Published on

ಕಾಸರಗೋಡು: ಕುಂಬಳೆ ಬಳಿ ಮುಟ್ಟಂ ಎಂಬಲ್ಲಿನ ಖಾಸಗಿ ಶಾಲೆಯೊಂದರಲ್ಲಿ ಸಮ್ಮೋಹನ ವಿದ್ಯೆ ಹೆಸರಲ್ಲಿ ಹಿರಿಯ ವಿದ್ಯಾರ್ಥಿಗಳು ನಡೆಸಿದ ಹಲ್ಲೆಯಿಂದ ಮೂವರು ಕಿರಿಯ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಶಾಲಾ ಅಧಿಕಾರಿಗಳು ಹಾಗೂ ಶಿಕ್ಷಕರನ್ನು ಪೊಲೀಸರು ತರಾಟೆಗೆ ತೆಗೆದುಕೊಂಡಿದ್ದಾರೆ. ಮುಟ್ಟಂ ಶಾಲೆಯೊಂದರಲ್ಲಿ ಇತ್ತೀಚೆಗೆ ಮೂವರು ಹಿರಿಯ ವಿದ್ಯಾರ್ಥಿಗಳು ಎಂಟನೇ ತರಗತಿಗೆ ಬಂದು ಸಮ್ಮೋಹನ ವಿದ್ಯೆ ಕಲಿಸುವುದಾಗಿ ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ಒಬ್ಬ ವಿದ್ಯಾರ್ಥಿ ಕುಸಿದು ಬಿದ್ದು ತಲೆಗೆ ಗಾಯವಾಗಿದ್ದು, ಇತರ ವಿದ್ಯಾರ್ಥಿಗಳಿಗೆ ಕತ್ತು ಹಾಗೂ ಮುಖಕ್ಕೆ ಗಾಯಗಳಾಗಿವೆ. ಇದು ಹಿಪ್ನೋಟಿಸಂ ಆಗಿದ್ದು, ಶಿಕ್ಷಕರೇ ಇದನ್ನು ಹೇಳಿಕೊಟ್ಟಿದ್ದಾರೆ. ಭಯ ಪಡಬೇಕಿಲ್ಲ ಎಂದೂ ಹಿರಿಯ ವಿದ್ಯಾರ್ಥಿಗಳು ಹೇಳಿರುವುದಾಗಿ ಮಾಹಿತಿ ಲಭಿಸಿದೆ.

ಶಾಲೆಯಲ್ಲಿ ನಡೆದ ಘಟನೆ ಬಹಿರಂಗಗೊಳ್ಳುತ್ತಿದ್ದಂತೆ ವಿದ್ಯಾರ್ಥಿಗಳ ಪಾಲಕರು ಆತಂಕಕ್ಕೊಳಗಾಗಿ, ಠಾಣೆಗೆ ಮಾಹಿತಿ ನೀಡಿದ್ದರು. ಶಾಲೆ ಅಧಿಕಾರಿಗಳು, ಶಿಕ್ಷಕರು, ಹಲ್ಲೆ ನಡೆಸಿದ ವಿದ್ಯಾರ್ಥಿಗಳನ್ನು ಠಾಣೆಗೆ ಕರೆಸಿದ ಪೊಲೀಸರು, ಹಿರಿಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net