

ತುಮಕೂರು: ಭಜರಂಗದಳದ ಕಾರ್ಯಕರ್ತರ ಮೇಲೆ ಯುವಕರ ಗುಂಪೊಂದು ದಾಳಿ ನಡೆಸಿ ಹಲ್ಲೆ ನಡೆಸಿದ್ದು, ಕೋಮುಸಂಘರ್ಷದ ಶಂಕೆ ಉಂಟಾಗಿದೆ. ತುಮಕೂರಿನ ಗುಬ್ಬಿ ಗೇಟ್ ಬಳಿ ಈ ಹಲ್ಲೆ ನಡೆದಿದೆ.
ಭಜರಂಗದಳದ ತುಮಕೂರು ಜಿಲ್ಲಾ ಸಂಚಾಲಕ ಮಂಜುಭಾರ್ಗವ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಬ್ಬ ಕಾರ್ಯಕರ್ತ ಕಿರಣ್ ಎಂಬವರ ಮೇಲೂ ಹಲ್ಲೆ ನಡೆದಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರೂ ಕಾರಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ರಾಡ್ನಿಂದ ಹಲ್ಲೆ ಮಾಡಿದೆ. ಹಲ್ಲೆ ಮಾಡಿದವರು ಅನ್ಯಕೋಮಿಗೆ ಸೇರಿದವರು ಎನ್ನಲಾಗಿದ್ದು, ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಲ್ಲೆ ನಡೆದಿದೆ.