

ಕಲಬುರಗಿ: ಪ್ರಚಾರಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಚಿಂಚೋಳಿ ಶಾಸಕ ಡಾ. ಅವಿನಾಶ ಜಾಧವ್ ವಾಹನಗಳ ಮೇಲೆ ಕಲ್ಲೂ ತೂರಾಟದ ಘಟನೆ ಶನಿವಾರ ರಾತ್ರಿ ನಡೆದಿದೆ.
ಶಾಸಕರು ಪ್ರಚಾರಕ್ಕೆ ತೆರಳುತ್ತಿರುವಾಗ ಶಾಸಕ ಅವಿನಾಶ ಜಾಧವ್ ಹಾಗೂ ಅವರ ಬೆಂಬಲಿಗ ವಾಹನಗಳ ಮೇಲೆ ಕಲ್ಲೂ ತೂರಾಟ ನಡೆಸಲಾಗಿದೆ.
ತಾಲೂಕಿನ ಚಂದಾಪುರ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳುವಾಗ ಗ್ರಾಮದ ಪರಿಶಿಷ್ಟ ಬಡಾವಣೆಯಿಂದ ತೆರಳುವಾಗ ಕಲ್ಲೂ ತೂರಾಟ ನಡೆದಿದೆ. ಕಾಂಗ್ರೆಸ್ ನವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.