ಕೃಷಿ ಪರಿಕರ ಮಾರಾಟ ಮಳಿಗೆ ಮೇಲೆ ದಾಳಿ

18-10-Shiva-3
ರಾಯಚೂರಿನಲ್ಲಿನ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಕಲಬುರ್ಗಿ ವಿಭಾಗದ ಜಾಗೃತ ಕೋಶದ ನಿರ್ದೇಶಕ ಕೆ.ಜಿಯಾವುಲ್ಲಾ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ ಹಾಗೂ ಸಿಬ್ಬಂದಿಗಳ ತಂಡ ಬುಧವಾರ ದಾಳಿ ನಡೆಸಿ ಪರಿಶೀಲನೆ ನಡೆಸಿತು.
Published on

ರಾಯಚೂರು: ಕೃಷಿ ಇಲಾಖೆ ಅಕಾರಿಗಳು ನಗರದಲ್ಲಿನ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆ ಹಾಗೂ ಗೋದಾಮುಗಳ ಮೇಲೆ ಬುಧವಾರ ಹಠಾತ್ ದಾಳಿ ನಡೆಸಿ ಪರಿಶೀಲನೆ ನಡೆಸಿ ನಿಯಮ ಪಾಲನೆ ಮಾಡದ ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿದರು.
ನಿಯಮ ಉಲ್ಲಂಘನೆ ಮಾಡಿದ ನಾಲ್ಕು ಅಂಗಡಿಗಳ ಮಾಲೀಕರಿಗೆ ಮಾರಾಟ ತಡೆಯುಂತೆ ನೋಟಿಸ್ ನೀಡಿದ ತಂಡ. ಮತ್ತೊಬ್ಬ ಅಂಗಡಿ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಯಿತು. ಐದು ಅಂಗಡಿಗಳಲ್ಲಿ ಪರಿಕರ ಮಾದರಿಗಳನ್ನು ಸಂಗ್ರಹಿಸಿ ಗುಣಮಟ್ಟ ಖಾತ್ರಿ ಪಡಿಸಿಕೊಳ್ಳಲು ಪ್ರಯೋಗಾಲಯಕ್ಕೆ ಕಳುಹಿಸಲಾಯಿತು.
ಈ ಸಂದರ್ಭದಲ್ಲಿ ಕಲಬುರ್ಗಿ ವಿಭಾಗದ ಜಾಗೃತ ಕೋಶದ ನಿರ್ದೇಶಕ ಕೆ.ಜಿಯಾವುಲ್ಲಾ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net