

ರಾಯಚೂರು: ನಗರದಲ್ಲಿ ಆಟೋಗಳಿಗೆ ಅಕ್ರಮವಾಗಿ ಆಟೋಗಳಿಗೆ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಗಳ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮೋಹನ್ ಶಾಂತಗೌಡ ಗುಣಕಿ ಶುಕ್ರವಾರ ದಾಳಿ ನಡೆಸಿ ಸಿಲೆಂಡರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದರು.
ನಗರದ ಆಟೋ ನಗರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪರಿಶೀಲನೆ ನಡೆಸಿ 12 ಗೃಹ ಬಳಕೆ ಸಿಲೆಂಡರ್, ಗ್ಯಾಸ್ ರಿಫಿಲ್ಲಿಂಗ್ ಮಾಡಲು ಬಳಸುತ್ತಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆದು ಮೂವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಆರ್.ವೆಂಕಣ್ಣ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.