ಮಾರಕಾಸ್ತ್ರಗಳಿಂದ ಕಡಿದು ಕೊಲೆ

crime
Published on
ಬೆಳ್ತಂಗಡಿ: ಅವಿವಾಹಿತ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಕೃಷಿಕ ಮತ್ತು ಎಲ್ ಐ ಸಿ ಪ್ರತಿನಿಧಿಯಾಗಿರುವ ಶಾಂತಪ್ಪ ಗೌಡ ದೇವಸ್ಯ (40) ಗುರುತಿಸಲಾಗಿದೆ.
ಸ್ಥಳೀಯ ನಿವಾಸಿ ಜಯಚಂದ್ರ ಎಂಬವನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜಾಗದ ವಿಚಾರವಾಗಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರ ಅನುಮಾನ. ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪಿಎಸ್ಐ ಕೃಷ್ಣಕಾಂತ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net