ಆತಂಕ ಸೃಷ್ಟಿಸಿದ ಒಂಟಿ ಸಲಗ

Elephant enter in naganur lake in shiggavi
Published on

ಸುಂಟಿಕೊಪ್ಪ: ಒಂಟಿ ಸಲಗವೊಂದು ತೋಟದಿಂದ ಹೆದ್ದಾರಿಗಿಳಿದಿದ್ದು, ಕೂದಲೆಳೆ ಅಂತರದಿಂದ ಆಟೋದಲ್ಲಿ ಪ್ರಯಾಣಿಸುತ್ತಿದ್ದವರು ಪಾರಾಗಿದ್ದಾರೆ.

ಮಂಗಳವಾರ ಬೆಳಗ್ಗೆ 5.30ರ ಸುಮಾರಿಗೆ ಗದ್ದೆಹಳ್ಳದ ಗಿರಿಯಪ್ಪ ಮನೆ ನಿವಾಸಿ ಆಲಿ ಅವರು ಆಟೋ ರಿಕ್ಷಾದಲ್ಲಿ ಕೇರಳಕ್ಕೆ ತೆರಳುವ ಪ್ರಯಾಣಿಕರನ್ನು ಚೆಟ್ಟಳ್ಳಿಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಪೊನ್ನತ್‌ಮೊಟ್ಟೆ ಬಳಿ ಏಕಾಏಕಿ ತೋಟದಿಂದ ಒಂಟಿ ಸಲಗವೊಂದು ರಸ್ತೆಗಿಳಿದು ಆಟೋ ರಿಕ್ಷಾವನ್ನು ಕಂಡು ಬೆನ್ನಟ್ಟಿದೆ. ಚಾಲಕನ ಸಮಯ ಪ್ರಜ್ಞೆಯಿಂದ ವಾಹನವನ್ನು ಅತೀ ವೇಗವಾಗಿ ಚಲಾಯಿಸುವ ಮೂಲಕ ಅಪಾಯದಿಂದ ಪಾರಾಗಿದ್ದಾರೆ.

ಈ ಭಾಗದಲ್ಲಿ ಪದೇ ಪದೆ ಕಾಡಾನೆಗಳು ರಸ್ತೆಯಲ್ಲಿ ಸಂಚರಿಸಿ ವಾಹನಗಳ ಮೇಲೆ ದಾಳಿ ನಡೆಸಿರುವ ಪ್ರಕರಣಗಳು ಮರುಕಳಿಸುತ್ತಿವೆ. ಇದರಿಂದ ಈ ಭಾಗದ ನಿವಾಸಿಗಳು ಜೀವ ಭಯದಲ್ಲಿ ಸಂಚರಿಸುವಂತಾಗಿದೆ. ಸಂಬಂಧಿಸಿದ ಅರಣ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net