ಬೆಳ್ತಂಗಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಆರೋಪ, ತಂಡದಿಂದ ಹಲ್ಲೆಗೊಳಗಾಗಿ ಓರ್ವ ಸಾವು

Pub crime
Published on

ಬೆಳ್ತಂಗಡಿ: ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರ ಮೇಲೆ ಗುಂಪು ನಡೆಸಿದ ಹಲ್ಲೆಯಿಂದಾಗಿ ಓರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ನಾರಾಯಣ ನಾಯ್ಕ(47) ಮತ್ತು ಅವರ ಹೆಂಡತಿಯ ಅಕ್ಕನ ಗಂಡ ಜಾರಪ್ಪ ನಾಯ್ಕ(55) ಮೇಲೆ ಹಲ್ಲೆ ನಡೆದಿದ್ದು, ಗಂಭೀರ ಗಾಯಗೊಂಡ ಜಾರಪ್ಪ ನಾಯ್ಕ ಆಸ್ಪತ್ರೆ ದಾರಿಯಲ್ಲಿ ಮೃತಪಟ್ಟಿದ್ದಾರೆ. ನಾರಾಯಣ ಅವರನ್ನು ತಂಡ ಅಡ್ಡಗಟ್ಟಿದ್ದು, ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಹೊರಿಸಿ ಹಲ್ಲೆ ನಡೆಸಿದೆ. ಇದನ್ನು ಜಾರಪ್ಪ ತಪ್ಪಿಸಲು ಬಂದಾಗ ಅವರನ್ನೂ ಥಳಿಸಲಾಗಿತ್ತು. ಇಬ್ಬರೂ ಗಂಭೀರ ಗಾಯಗೊಂಡು ಬಿದ್ದಿದ್ದರು. ಈ ವೇಳೆ ಜಾರಪ್ಪ ಅವರ ಪುತ್ರ ರಾಜಶೇಖರ್ ಎಂಬವರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಓರ್ವ ದಾರಿಯಲ್ಲೇ ಕೊನೆಯುಸಿರೆಳೆದಿದ್ದಾರೆ. ನಾರಾಯಣ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೋಹರ್, ಚಂದ್ರಕಾಂತ ನಾಯ್ಕ, ದೀಪಕ್ ರೈ, ಹರಿಪ್ರಸಾದ್, ವಿಜಯ್, ವೈಶಾಲಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net