

ಹೊಸಪೇಟೆ: ತುಮಕೂರಿನಲ್ಲಿ ವಕೀಲ ರವಿಕುಮಾರ್ ಮೇಲೆ ನಡೆದ ಹಲ್ಲೆ ಖಂಡಿಸಿ ನಗರದಲ್ಲಿ ವಕೀಲರ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಿ, ಗ್ರೇಡ್2 ತಹಸೀಲ್ದಾರ್ ವೆಂಕಟೇಶ್ ಆಶ್ರೀತ್‌ಗೆ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ವಕೀಲರ ಮೇಲೆ ಸಿಪಿಐ ಹಲ್ಲೆ
ವಕೀಲ ರವಿಕುಮಾರ್‌ಗೆ ತುಮಕೂರು ನಗರ ಸಿಪಿಐ ವಿನಾಕಾರಣ ನಿಂದಿಸಿ ಹಲ್ಲೆ ಮಾಡಿದ್ದಾರೆ. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯದ ವಿವಿಧೆಡೆ ವಕೀಲರ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಪ್ರಕರಣಗಳು ಪುನರಾವರ್ತನೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.