ಜ್ಞಾನ ಮಾರ್ಗದಲ್ಲಿ ಪರಿಪೂರ್ಣತೆ ಸಾಧಿಸಿ: ಶ್ರೀಶಂಕರ ಭಾರತೀ ಸ್ವಾಮೀಜಿ

33
Published on

ಮೈಸೂರು: ಅನ್ನ ಮತ್ತು ನೀರು, ತೃಪ್ತಿಯ ಘಟ್ಟ ತಲುಪಿಸಿದರೆ, ಜ್ಞಾನ ಮಾರ್ಗದಲ್ಲಿ ಪರಿಪೂರ್ಣತೆ ಸಾಧಿಸಲು ಸಾಧ್ಯವಿದೆ
ಎಂದು ಯಡತೊರೆ ಶ್ರೀಯೋಗಾನಂದೇಶ್ವರ ಮಠದ ಶ್ರೀಶಂಕರ ಭಾರತೀ ಸ್ವಾಮೀಜಿ ಹೇಳಿದರು.
ಕನಕದಾಸನಗರದಲ್ಲಿರುವ (ದಟ್ಟಗಳ್ಳಿ) ನೈಪುಣ್ಯ ಸ್ಕೂಲ್ ಆಫ್ ಎಕ್ಸಲೆನ್ಸ್‌ನ ನೂತನ ಶಾಲಾ ಕ್ಯಾಂಪಸ್‌ನಲ್ಲಿ ಶುಕ್ರವಾರ ಪಾದ ಪೂಜೆ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು.
ವಿದ್ಯೆ ಎಂದರೆ ಕೇವಲ ಅಕ್ಷರ ಕಲಿಕೆಯಲ್ಲ. ಮನುಷ್ಯ ಜನ್ಮವನ್ನು ಸಾರ್ಥಕಗೊಳಿಸುವ ಸಂಸ್ಕಾರ ಪಡೆಯುವುದೇ ಆಗಿದೆ. ವಿದ್ಯೆಯಲ್ಲಿ ವಿವಿಧ ವಿಷಯಗಳ ಶಾಸ್ತ್ರ ಅಧ್ಯಯನಕ್ಕೆ ಅವಕಾಶವಿದೆ. ಇವೆಲ್ಲವೂ ವ್ಯಾಪಾರಿ ಸ್ಪರ್ಶದ ಕಾರಣಕ್ಕಾಗಿ ರೂಪಿಸಿರುವುದಲ್ಲ. ಸಮಾಜಮುಖಿಯಾಗಿ, ಜೀವ ಜಗತ್ತಿನ ಕಲ್ಯಾಣಕ್ಕಾಗಿ ಸಮರ್ಪಣೆಯಿಂದ ಕಾರ್ಯ ನಿರ್ವಹಿಸುವ ಮಾರ್ಗ ತೋರಿಸುವುದಕ್ಕಾಗಿ ಎನ್ನುವುದನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿಯಬೇಕಿದೆ ಎಂದರು.
ಭಾರತೀಯ ಪರಂಪರೆಯ ಶಿಕ್ಷಣದ ಜತೆಗೆ ಜಾಗತಿಕ ಮಟ್ಟದಲ್ಲಿ ನಮ್ಮ ಮಕ್ಕಳು ಪೈಪೋಟಿ ನಡೆಸುವಂತಾಗಲು ಉತ್ತಮ ಶಿಕ್ಷಣ ನೀಡಬೇಕು. ಇವರೆಲ್ಲರೂ ದೇಶ ಕಟ್ಟುವ ಸತ್ಪ್ರಜೆಗಳಾಗಬೇಕು. ಯಾವ ಮಗುವಿನಲ್ಲಿ ಎಂತಹ ಸಾಧಕ ಅಡಗಿದೆಯೋ ತಿಳಿದಿಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಮಗುವನ್ನು ಭವಿಷ್ಯದ ಮಹಾನ್ ಸಾಧಕನೆಂದೇ ಪಾಠ ಕಲಿಸುವ ಶಿಕ್ಷಕರು ಅರಿಯಬೇಕು ಎಂದರು.
ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ, ಸಂಸ್ಥೆ ಅಧ್ಯಕ್ಷ ಆರ್ ರಘು, ಕಾರ್ಯದರ್ಶಿ ಕೌಟಿಲ್ಯ, ಟ್ರಸ್ಟಿ ವರ್ಣಿಕ, ಡೀನ್ ವಿಜಯಾ ಅಯ್ಯರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net