

ಉಡುಪಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಬ್ರಹ್ಮಗಿರಿ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸುವ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಿದ ಪೊಲೀಸರು ಪ್ರಮುಖ ನಾಯಕರನ್ನು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಪಾಕ್ ಪರ ಘೋಷಣೆ ಬಗ್ಗೆ ಮೌನ ವಹಿಸಿರುವ ಕಾಂಗ್ರೆಸ್ ಯಾರ ಪರವಿದೆ ಎಂಬುದು ತಿಳಿಯುತ್ತದೆ. ಕಾಂಗ್ರೆಸ್ ಮತ್ತು ಪಾಕಿಸ್ಥಾನ ಒಂದೇ ನಾಣ್ಯದ 2 ಮುಖ. ದೇಶವಿರೋಧಿ ಮನಸ್ಥಿತಿ ಹೊಂದಿರುವವರಿಗೆ ಕಾಂಗ್ರೆಸ್ ಟಿಕೇಟ್ ನೀಡಿರುವುದು ನಾಚಿಕೆಗೇಡಿನ ಸಂಗತಿ. ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಯಾಗಿದ್ದರೂ ಸ್ಪೀಕರ್ ಮೂಕಪ್ರೇಕ್ಷಕರಾಗಿರುವುದು ಪ್ರಶ್ನಾರ್ಹವಾಗಿದೆ ಎಂದರು.
ಪ್ರತಿಭಟನೆಯಲ್ಲಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ ಶೆಟ್ಟಿ, ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ವಕ್ತಾರ ಮುಟ್ಲುಪಾಡಿ ಸತೀಶ್ ಶೆಟ್ಟಿ, ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಪ್ರಭಾಕರ ಪೂಜಾರಿ, ಬಿಜೆಪಿ ದ.ಕ. ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮುಖಂಡರುಗಳಾದ ಶ್ರೀಶ ನಾಯಕ್ ಪೆರಣಂಕಿಲ, ದಿನಕರ ಬಾಬು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್ ಬೈಲೂರು, ಜಯರಾಮ್ ಸಾಲ್ಯಾನ್, ಶಿವಕುಮಾರ್ ಅಂಬಲಪಾಡಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ವೀಣಾ ಎಸ್. ಶೆಟ್ಟಿ, ಶ್ರೀನಿಧಿ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.