ಸಾಲ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರಕ್ಕೆ ಯತ್ನ

FotoJet
Published on

ಕನಕಪುರ: ಸಾಲ ಕೊಡಿಸುವುದಾಗಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯನ್ನು ನಂಬಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಸಾತನೂರು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ, ತಾಲೂಕಿನ ಸೂರನಹಳ್ಳಿ ಚೆಲುವರಾಮು (32) ಬಂಧಿತ.

ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರಿಗೆ ಜಮೀನಿನ ಮೇಲೆ ಸಾಲ ಕೊಡಿಸುವುದಾಗಿ ನಂಬಿಸಿ, ರಾಮನಗರ ಬಳಿಯ ಹೋಟೆಲ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂದು ಸಂತ್ರಸ್ತೆ ಸಾತನೂರು ಪೊಲೀಸರಿಗೆ ದೂರು ನೀಡಿದ್ದಾರೆ. ಸೂರನಹಳ್ಳಿ ಚೆಲುವರಾಮು ಹಾಗೂ ಬೊಮ್ಮನಹಳ್ಳಿ ರವಿ ಪರಿಚಯವಾಗಿ, ನಂತರ ಪ್ರಭಾವಿಗಳ ಸಂಪರ್ಕವಿದೆ ಎಂದು ನಂಬಿಸಿ ಜಮೀನಿನ ದಾಖಲೆ ಕೇಳುವ ನೆಪದಲ್ಲಿ ಸಲುಗೆ ಹೊಂದಿದ್ದರು. ಜಮೀನಿನ ದಾಖಲಾತಿ ಪಡೆದು ಸಾಲ ಕೊಡಿಸುವುದಾಗಿ ನಂಬಿಸಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿದೆ.

ಪೊಲೀಸರು ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಮತ್ತೊಬ್ಬ ಆರೋಪಿ ರವಿ ತಲೆಮರೆಸಿಕೊಂಡಿದ್ದು, ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net