ಕಾನೂನು ಪರಿಮಿತಿಯಲ್ಲಿ ಸಮಸ್ಯೆ ಪರಿಹಾರಕ್ಕೆ ಯತ್ನ

kdr3 (4)
Published on

ಕಡೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮಸ್ಯೆಗಳಿಗೆ ಕಾನೂನಿನ ಪರಿಮಿತಿಯಲ್ಲಿ ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ ಹೇಳಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ತಾಲೂಕು ಮಟ್ಟದ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನುಪಾಲನಾ ವರದಿಯಲ್ಲಿ ಸಮಸ್ಯೆಗಳಿದ್ದರೆ ಕೂಡಲೇ ಗಮನಕ್ಕೆ ತಂದರೆ ಕ್ರಮ ವಹಿಸಲಾಗುತ್ತದೆ ಎಂದರು.

ಡಿಎಸ್‌ಎಸ್ ಮುಖಂಡ ಮಂಜಪ್ಪ ಮಾತನಾಡಿ, ತಾಲೂಕಿನಲ್ಲಿ ಅನೇಕ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಸ್ಮಶಾನದ ಸಮಸ್ಯೆ ಇದೆ. ಇದರ ಬಗ್ಗೆ ಅನೇಕ ಬಾರಿ ವಿಷಯ ಪ್ರಸ್ತಾಪಿಸಿದರೂ ಸಮಸ್ಯೆ ಬಗೆಹರಿದಿಲ್ಲ ಎಂದು ದೂರಿದರು. ಬಿ.ಟಿ.ಚಂದ್ರಶೇಖರ್ ಮಾತನಾಡಿ, ಬೀರೂರು ಪುರಸಭೆ ವ್ಯಾಪ್ತಿಯಲ್ಲಿ 30 ವರ್ಷಗಳಿಂದ ಪರಿಶಿಷ್ಟರಿಗೆ ಒಂದು ನಿವೇಶನಗಳನ್ನು ನೀಡಿಲ್ಲ . ಜಮೀನುಗಳನ್ನು ಖರೀದಿಸಿ ದಲಿತರಿಗೆ ನೀಡಬೇಕು ಎಂದರು.

ಬೀರೂರು ಎನ್.ಗಿರೀಶ್ ಮಾತನಾಡಿ, ಬೀರೂರು ಪಟ್ಟಣದಲ್ಲಿ ಸ್ಲಂ ಬೋರ್ಡ್‌ನಿಂದ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲು ಸರ್ಕಾರದ ಉದ್ದೇಶಿಸಿತ್ತು. ಇದಕ್ಕೆ ಲಾನುಭವಿಗಳು 63 ಸಾವಿರ ಹಣವನ್ನು ಡಿಡಿ ಮೂಲಕ ಸರ್ಕಾರಕ್ಕೆ ಪಾವತಿಸಿದ್ದಾರೆ. ಆದರೆ ಇಲ್ಲಿಯವರೆಗೆ ಮನೆ ನಿರ್ಮಾಣವಾಗಿಲ್ಲ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ. ಗುತ್ತಿಗೆದಾರರನ್ನು ಪ್ರಶ್ನಿಸಿದರು ಬಿಲ್ ಪಾವತಿಯಾಗಿಲ್ಲ ಎನ್ನುತ್ತಾರೆ. ಡಿಡಿ ಹಣ ಪಾವತಿಸಿದವರು ಕಂಗಾಲಾಗಿದ್ದಾರೆ ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಎಂದರು.

ತಾಪಂ ಇಒ ಸಿ.ಅರ್.ಪ್ರವೀಣ್, ಸಮಾಜ ಕಲ್ಯಾಣಾಧಿಕಾರಿ ನಟರಾಜ್, ಕಡೂರಹಳ್ಳಿ ಪ್ರಶಾಂತ್, ಕಡೂರು ವೃತ್ತ ನಿರೀಕ್ಷಕ ರಫೀಕ್, ಡಾ.ಭೀಮರಾವ್ ಕ್ರಾಂತಿಕಾರಿ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಕುಂಕಾನಾಡು ಮಂಜುನಾಥ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net