ಹಿಂದು ಧರ್ಮ ಒಡೆಯುವ ಪ್ರಯತ್ನ

22MANJARI1
Published on

ಮಾಂಜರಿ: ಸಿದ್ದರಾಮಯ್ಯನಂತಹ ನೂರು ಜನ ಬಂದರೂ ಹಿಂದು ಧರ್ಮ ಮಲಿನ ಮಾಡಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಗುಡುಗಿದರು.

ಗ್ರಾಮದ ಶ್ರೀ ಕಾಡಸಿದ್ದೇಶ್ವರ ಸಂಸ್ಥಾನ ಮಠದಲ್ಲಿ ಭಾನುವಾರ ಮಹಾಲಯ ಅಮಾವಾಸ್ಯೆ ನಿಮಿತ್ತ ಹಮ್ಮಿಕೊಂಡಿದ್ದ ಮಾಸಿಕ ಚಿಂತನಗೋಷ್ಠಿಯಲ್ಲಿ ಮಾತನಾಡಿ, ಮತಾಂತರ ತಡೆಯುವುದು ಸರ್ಕಾರದ ಕೆಲಸವಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಪ್ರಾಯೋಜಿತ ಕೆಲಸ ಮಾಡುತ್ತಿದ್ದಾರೆ. ಸಮೀಕ್ಷೆ ವಿರೋಧಿಸುವ ಸಚಿವರು ರಾಜೀನಾಮೆ ಕೊಟ್ಟು ಬರಲಿ ಎಂದು ಹೇಳಿಕೆ ಕೊಟ್ಟು ನಾಟಕವಾಡುವವರನ್ನು ಸಮುದಾಯ ಕ್ಷಮಿಸುವುದಿಲ್ಲ. ರಾಜ್ಯ ಸರ್ಕಾರ ನಡೆಸುವ ಸಮೀಕ್ಷೆಗಳು ಅಧಿಕೃತವಲ್ಲ. ಮುಂಬರುವ ಸರ್ಕಾರಗಳು ಸಮೀಕ್ಷೆಯನ್ನು ತಿರಸ್ಕರಿಸಲೂಬಹುದು ಎಂದರು.

ಶ್ರೀಶೈಲ ಪೀಠದ ಜಗದ್ಗುರುಗಳು, ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣವರ, ಅಮೃತೇಶ್ವರ ಶಿವಾಚಾರ್ಯ ಸ್ವಾಮೀಜಿ, ಬಾಳಗೌಡ ಪಾಟೀಲ, ಮಲ್ಲಪ್ಪ ಸಿಂಧೂರ ಇತರರಿದ್ದರು.

ವೀರಶೈವ ಲಿಂಗಾಯತ ಎಂದು ನಮೂದಿಸಲಿ ರಾಜ್ಯದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಜನಗಣತಿಯ ಸಮೀಕ್ಷೆಯಲ್ಲಿ ಎಲ್ಲ ವೀರಶೈವ ಲಿಂಗಾಯತ ಸಮುದಾಯದವರು ಧರ್ಮ ಕಾಲಂನಲ್ಲಿ ವೀರಶೈವ ಲಿಂಗಾಯತ ಹಾಗೂ ಇನ್ನುಳಿದ ಕಾಲಂನಲ್ಲಿ ಉಪಜಾತಿಗಳನ್ನು ನಮೂದಿಸಬೇಕೆಂದು ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net