ಕೊಲೆ ಯತ್ನ ಪ್ರಕರಣದ ಆರೋಪಿ ಸೆರೆ

arrested
Published on

ಕಾಸರಗೋಡು: ಕುಂಬಳೆ ಪೇಟೆಯಲ್ಲಿ ಇಬ್ಬರು ಯುವಕರಿಗೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿ, ಜಾಮೀನಿನಲ್ಲಿ ಹೊರಬಂದು ತಲೆಮರೆಸಿಕೊಂಡಿದ್ದ ಮೊಗ್ರಾಲ್‌ಪುತ್ತೂರು ಪಂಜಿಗುಡ್ಡೆ ನಿವಾಸಿ ಮಹಮ್ಮದ್ ಕೆ.ಎ. ಎಂಬಾತನನ್ನು ಕುಂಬಳೆ ಇನ್‌ಸ್ಪೆಕ್ಟರ್ ಟಿ.ಕೆ.ಮುಕುಂದನ್ ನಿರ್ದೇಶನದ ಪ್ರಕಾರ ಎಸ್‌ಐ ಕೆ.ಶ್ರೀಜೇಶ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. 2016 ಮೇ 5ರಂದು ಕುಂಬಳೆ ಬದ್ರಿಯಾ ನಗರದಲ್ಲಿ ಮಹಮ್ಮದ್ ಹನೀ, ಶಂಸು ಎಂಬುವರಿಗೆ ಕಡಿದು ಕೊಲೆಗೆ ಯತ್ನಿಸಿದ ಬಗ್ಗೆ ಕುಂಬಳೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಮಹಮ್ಮದ್‌ನನ್ನು ಪೊಲೀಸರು ಬಂಧಿಸಿದ್ದು, ಜಾಮೀನಿನಲ್ಲಿ ಬಿಡುಗಡೆಗೊಂಡ ನಂತರ ತಲೆಮರೆಸಿಕೊಂಡಿದ್ದನು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net