ಎಟಿಎಂನಲ್ಲಿ ದರೋಡೆಗೆ ಯತ್ನ, ಆರೋಪಿ ಸೆರೆ

Published on

ಬಳ್ಳಾರಿ : ನಗರದ ಕಾಳಮ್ಮ ವೃತ್ತದ ಆಕ್ಸಿಸ್ ಬ್ಯಾಂಕ್ ನಲ್ಲಿ ದರೋಡೆಗೆ ಯತ್ನಿಸಿದ ವೇಳೆ ಆರೋಪಿಯನ್ನು ಪೊಲೀಸರು ಸೋಮವಾರ ತಡರಾತ್ರಿ ಬಂಧಿಸಿದ ಘಟನೆ ನಡೆದಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಆರ್.ವೆಂಕಟೇಶ ಕೋಡಿಗುಡ್ಡ ಬಂಧಿತ.

ಆರೋಪಿಯು ತಡರಾತ್ರಿ ವೇಳೆ ಆಕ್ಸಿಸ್ ಬ್ಯಾಂಕ್ ಎಟಿಎಂ ಒಡೆದು ಹಣ ಕಳ್ಳತನಕ್ಕೆ ಯತ್ನಿಸಿದ್ದ. ರಾತ್ರಿ ಪಾಳಯದಲ್ಲಿದ್ದ ಬ್ರೂಸ್ ಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net