

ರಾಯಚೂರು: ಕೇಂದ್ರ ಸರ್ಕಾರ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷಗಳನ್ನು ದಮನ ಮಾಡಲು ಸಂಚು ರೂಪಿಸಿದ್ದು, ಏನೇ ಮಾಡಿದರೂ ಕೇಂದ್ರದಲ್ಲಿ ಕಾಂಗ್ರೆಸ್ ಅಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಸ್ಥಳೀಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಐಟಿ ಇಲಾಖೆಯನ್ನು ಬಳಸಿಕೊಂಡು ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದ್ದು, ಬಿಜೆಪಿಯೇತರ ಸಿಎಂಗಳನ್ನು ಬಂಸುವ ಕೆಲಸ ಆರಂಭಿಸಿದೆ ಎಂದರು.
ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ಏನು ಮಾಡಿದ್ದಾರೆ ಎಂದು ದೇಶದ ಜನರಿಗೆ ಗೊತ್ತಿದೆ. ಸುಳ್ಳು ಭರವಸೆಗಳನ್ನು ನೀಡಿ ಅಕಾರಕ್ಕೆ ಬಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಜನರ ಸಂಕಷ್ಟಕ್ಕೆ ನೆರವಾಗಿದೆ.
ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಿ.ಕುಮಾರನಾಯಕ ಜಿಲ್ಲೆಯ ಜನರಿಗೆ ಹೊಸಬರಲ್ಲ. ಜನರೊಂದಿಗೆ ಅವಿನಾಭವ ಸಂಬಂಧವಿದ್ದು, ಅಕಾರಾವಯಲ್ಲಿ ಕಪ್ಪು ಚುಕ್ಕೆಯಿಲ್ಲದೆ ಸೇವೆ ಸಲ್ಲಿಸಿದ್ದಾರೆ. ಅವರನ್ನು ಗೆಲ್ಲಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಪಕ್ಷದ ಕಾರ್ಯಾಧ್ಯಕ್ಷ ಎ.ವಸಂತಕುಮಾರ ಮಾತನಾಡಿ, ಲೋಕಸಭೆ ಚುನಾವಣೆ ಲಿತಾಂಶ ದೇಶದ ಭವಿಷ್ಯವನ್ನು ಬದಲಾವಣೆ ಮಾಡಲಿದೆ. ಪ್ರಧಾನಿ ಮೋದಿಯ ಸರ್ವಾಕಾರಿ ಹಾಗೂ ಜನ ವಿರೋ ನೀತಿ, ಒಡೆದು ಆಳುವ ನೀತಿ ವಿರುದ್ಧ ಹೋರಾಟ ನಡೆಸಬೇಕಾಗಿದೆ. ಸಂವಿಧಾನದ ಆಶೋತ್ತರಗಳನ್ನು ಗೆಲ್ಲಿಸಲು ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದರು.
ಲೋಕಸಭೆ ಚುನಾವಣೆಯ ಪಕ್ಷದ ಅಭ್ಯರ್ಥಿ ಜಿ.ಕುಮಾರನಾಯಕ ಮಾತನಾಡಿ, ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡುವ ಮೂಲಕ ಪಕ್ಷದ ನಾಯಕರು ವಿಶೇಷ ಜವಾಬ್ದಾರಿ ನೀಡಿದ್ದಾರೆ. 38 ವರ್ಷಗಳ ಕಾಲ ನಿಷ್ಠೆ, ಜನಪರ ಕಾಳಜಿಯಿಂದ ಕರ್ತವ್ಯ ನಿರ್ವಹಿಸಿದ್ದೇನೆ.
ಸೇವೆಯಿಂದ ನಿವೃತ್ತಿಯ ನಂತರ ಕೈಕಾಲು ಗಟ್ಟಿಯಾಗಿದ್ದು ಜನರ ಸೇವೆ ಮಾಡೋಣ ಎಂದು ರಾಜಕೀಯಕ್ಕೆ ಬಂದಿದ್ದೇನೆ. ಜನರು ನನ್ನನ್ನು ಗೆಲ್ಲಿಸುವ ಬಗ್ಗೆ ಸಂಶಯವಿಲ್ಲ. ಐದು ವರ್ಷಗಳ ಕಾಲ ಸಂಪೂರ್ಣವಾಗಿ ಜನ ಸೇವೆಗೆ ಸಮಯ ಮೀಸಲಿಡುತ್ತೇನೆ.
ದೇಶ ಇಂದು ವಿಷಮ ಪರಿಸ್ಥಿತಿಯಲ್ಲಿದೆ. ಸಾಮಾಜಿಕ ಸಂರಚನೆ ಕಿತ್ತಿ ಹಾಕುವ ಕೆಲಸ ನಡೆಯುತ್ತಿದ್ದು, ಹುಸಿ ಭರವಸೆಗಳಿಂದ ಜನರಿಗೆ ಭ್ರಮನಿರಸನವಾಗಿದ್ದು, ಉತ್ತಮ ಆಡಳಿತಕ್ಕಾಗಿ ಕಾಂಗ್ರೆಸ್‌ಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಎಂಎಲ್ಸಿ ಶರಣಗೌಡ ಬಯ್ಯಪುರ, ಮಾಜಿ ಶಾಸಕ ಸೈಯದ್ ಯಾಸೀನ್, ಮಾಜಿ ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿ, ಮುಖಂಡರಾದ ಪಾರಸಮಲ್ ಸುಖಾಣಿ, ಮಹ್ಮದ್ ಶಾಲಂ, ಕೆ.ಶಾಂತಪ್ಪ, ಜಯಣ್ಣ, ಜಿ.ಬಸವರಾಜರೆಡ್ಡಿ, ಶ್ರೀದೇವಿ ನಾಯಕ ಉಪಸ್ಥಿತರಿದ್ದರು.