ಗಮನ ಸೆಳೆದ ಪಥ ಸಂಚಲನ

17-OCT-GPT-4
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಶುಕ್ರವಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.
Published on

ಗುಂಡ್ಲುಪೇಟೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಶುಕ್ರವಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.

ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಭಗವಾಧ್ವಜಕ್ಕೆ ವಂದನೆ ಸಲ್ಲಿಸಿದ ಸುಮಾರು 200 ಕ್ಕೂ ಹೆಚ್ಚಿನ ಗಣವೇಶಧಾರಿಗಳು ಚಾಮರಾಜನಗರ ಜೋಡಿ ರಸ್ತೆ, ಕಿತ್ತೂರುರಾಣಿ ಚೆನ್ನಮ್ಮ ರಸ್ತೆ, ವೀರ ಮದಕರಿನಾಯಕ ರಸ್ತೆಗಳಲ್ಲಿ ಪಥ ಸಂಚನ ನಡೆಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.

ಆರ್‌ಎಸ್‌ಎಸ್‌ನ ದೀಪಕ್, ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್, ಬಿಜೆಪಿ ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್, ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಕಮರಹಳ್ಳಿ ರವಿ, ಹುಂಡೀಪುರ ಗ್ರಾಮಪಂಚಾಯಿತಿ ಅಧ್ಯಕ್ಷ ನಂಜಪ್ಪ, ಕಲ್ಲಹಳ್ಳಿ ಮಹೇಶ್, ಎಸ್.ಸಿ.ಮಂಜುನಾಥ್ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net