

ವಿಜಯವಾಣಿ ಸುದ್ದಿಜಾಲ ಕಾರ್ಕಳ
ಹದಿಹರೆಯದಲ್ಲಿ ಆಕರ್ಷಣೆ ಜಾಸ್ತಿ ಇರುತ್ತದೆ. ಇದರಿಂದ ದುಶ್ಚಟಗಳಿಗೆ ಬೇಗನೆ ಒಳಗಾಗುತ್ತಾರೆ. ವಾದಕದ್ರವ್ಯ ದುಶ್ಚಟಕ್ಕೆ ಬಲಿಯಾದರೆ ಜೀವನ ಸರ್ವ ನಾಶವಾಗುತ್ತದೆ. ವಿದ್ಯಾರ್ಥಿಗಳು ದೈಹಿಕ, ವಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡಬೇಕು ಎಂದು ಕಾರ್ಕಳ ನಗರ ಠಾಣೆ ಸಬ್ ಇನ್‌ಸ್ಪೆಕ್ಟರ್ ಮುರಳೀಧರ ನಾಯ್ಕ ಹೇಳಿದರು.
ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಾದಕದ್ರವ್ಯ ವ್ಯಸನ ವಿರುದ್ಧ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಾತನಾಡಿದರು.
ವಾದಕದ್ರವ್ಯ ನಮ್ಮ ಜೀವನವನ್ನು ಸರ್ವ ನಾಶ ವಾಡುವುದರ ಜತೆಗೆ ಸವಾಜದಲ್ಲಿ ಅಶಾಂತಿ, ಅರಾಜಕತೆಗೆ ಕಾರಣವಾಗುತ್ತದೆ. ಅಪರಾಧ ಚಟುವಟಿಕೆ ಹೆಚ್ಚಾಗುತ್ತವೆ. ಮಕ್ಕಳು ವಾದಕದ್ರವ್ಯಗಳ ಬಗ್ಗೆ ಜಾಗರೂಕತೆಯಿಂದ ಇರುವುದರ ಜತೆಗೆ ವಾದಕದ್ರವ್ಯ ವಾರಾಟ, ಸೇವನೆ ವಾಹಿತಿ ಇದ್ದರೆ ತಕ್ಷಣ ಪೂಲೀಸರಿಗೆ ತಿಳಿಸಬೇಕು. ಸಾವಾಜಿಕ ಜಾಲತಾಣಗಳಲ್ಲಿ ಕೆಟ್ಟ ಕಾರ್ಯ ಚಟುವಟಿಕೆಗಳಿಂದ ದೂರವಿದ್ದು, ಓದಿನ ಕಡೆ ಗಮನ ಹರಿಸಬೇಕು ಎಂದರು.
ವಾದಕದ್ರವ್ಯ ವಿರೋಧಿ ಸಮಿತಿ ಅಧ್ಯಕ್ಷ, ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾಮತ್, ಸಮಿತಿ ಉಪನ್ಯಾಸಕ ಸದಸ್ಯೆ, ರಸಾಯನಶಾಸ ಉಪನ್ಯಾಸಕಿ ನಯನಾ, ಭೌತಶಾಸ ಉಪನ್ಯಾಸಕ ಪದ್ಮನಾಭ ನಾಯಕ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.