ಶಿಸ್ತು ಹಾಗೂ ಸಂಭ್ರಮದಿಂದ ಆಚರಿಸಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

24GDG09
Published on

ವಿಜಯವಾಣಿ ಸುದ್ದಿಜಾಲ ಗದಗ
ಸ್ವಾತಂತ್ರೊತ್ಸವ ದಿನಾಚರಣೆಯನ್ನು ಶಿಸ್ತು ಹಾಗೂ ಸಂಭ್ರಮದಿಂದ ಯಾವುದೇ ಲೋಪ ದೋಷಗಳಿಲ್ಲದಂತೆ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯತೆ ವಹಿಸಿ ಮಾತನಾಡಿ ಅವರು, ಆಗಸ್ಟ 14 ಹಾಗೂ 15 ರಂದು ಎರಡು ದಿನಗಳ ಕಾಲ ಜಿಲ್ಲಾಡಳಿತ ಭವನದ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳು, ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್​ ದೀಪಾಲಂಕಾರ ಮಾಡಬೇಕು ಎಂದರು. ಆ. 15 ರಂದು ಬೆ.7.30 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಳಿಂದ ಧ್ವಜಾರೋಹಣ ಕಾರ್ಯಕ್ರಮ ಜರುಗುವುದು. ಬೆಳಗ್ಗೆ 9 ಗಂಟೆಗೆ ನಗರದ ಕೆ.ಎಚ್​.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಂದು ಶಾಲಾ ಕಾಲೇಜು ಸಿಬ್ಬಂದಿ, ವಿದ್ಯಾಥಿರ್ಗಳು ಹಾಗೂ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ನಗರದ ಜಿಲ್ಲಾ ಕ್ರೀಡಾಂಗಣ ಹಾಗೂ ಪ್ರಮುಖ ವೃತ್ತಗಳ ಸ್ವಚ್ಛತೆಗೆ ನಗರಸಭೆ ಪೌರಾಯುಕ್ತರು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಸಮಾರಂಭದಲ್ಲಿ ವಿವಿಧ ೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದ್ದು, ಗಣ್ಯ ವ್ಯಕ್ತಿಗಳಿಗೆ ಶಿಷ್ಠಾಚಾರದನ್ವಯ ಆಸನದ ವ್ಯವಸ್ಥೆ ಹಾಗೂ ಸನ್ಮಾನ ಕಾರ್ಯಕ್ರಮಕ್ಕೂ ಸಹ ಸೂಕ್ತ ಆಸನದ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು. ನಗರದ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಪ್ರಮುಖ ಬೀದಿ ಹಾಗೂ ವೃತ್ತಗಳ ಸ್ವಚ್ಛತೆ ಕುರಿತು ನಗರಸಭೆ ಪೌರಾಯುಕ್ತರು ನಿಗಾ ವಹಿಸಬೇಕು. ಕಾರ್ಯಕ್ರಮದ ದಿನ ತುರ್ತು ಸೇವೆಗಾಗಿ ಅಂಬುಲೆನ್ಸ್​ ವ್ಯವಸ್ಥೆಗೆ ಕ್ರಮ ವಹಿಸಬೇಕು ಎಂದರು.
ಜಿಲ್ಲಾ ಪೊಲೀಸ್​ ವರಿಷ್ಠಾದಿಕಾರಿ ಬಿ. ಎಸ್​. ನೇಮಗೌಡ ಮಾತನಾಡಿ, ವಿವಿಧ ೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಗುತ್ತದೆ. ಆ ಸಂದರ್ಭದಲ್ಲಿ ಸನ್ಮಾನಿತರಿಗಾಗಿ ಪ್ರತ್ಯೇಕವಾಗಿ ಮುಂಚಿತವಾಗಿಯೇ ನಿಗದಿತ ಆಸನದ ವ್ಯವಸ್ಥೆ ಮಾಡಿದರೆ ಅವರನ್ನು ಕರೆತಂದು ಸನ್ಮಾನ ಸಮಾರಂಭ ಜರುಗಿಸಲು ಸುಲಭವಾಗುತ್ತದೆ ಎಂದರು.
ಜಿಪಂ ಸಿಇಓ ಭರತ್​ ಎಸ್​ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ದಿನ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಆರಂಭ ಆಗುವದಕ್ಕಿಂತ ಮುಂಚೆಯೇ ಎಲ್ಲ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ನಿಗದಿತ ಸ್ಥಾನಗಳಲ್ಲಿ ಉಪಸ್ಥಿತರಿದ್ದು ಶಿಸ್ತಿನಿಂದ ತಮ್ಮ ಕಾರ್ಯ ನಿರ್ವಹಿಸಬೇಕು. ಅಂದಾಗ ಕಾರ್ಯಕ್ರಮದಲ್ಲಿ ಗೊಂದಲಗಳು ಆಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.
ಅಪರ ಜಿಲ್ಲಾಧಿಕಾರಿ ಅನ್ನರ್ಪೂಣ ಎಂ. ಮಾತನಾಡಿ, ವಿವಿಧ ರಂಗಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಕ್ಕೆ ಆಯಾ ಇಲಾಖಾ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಸಭೆಯಲ್ಲಿ ಶಿಷ್ಟಾಚಾರ ಅನುಸಾರ ಆಮಂತ್ರಣ ಪತ್ರಿಕೆ ಮುದ್ರಣ, ಅಲ್ಪೋಪಹಾರದ ವ್ಯವಸ್ಥೆ, ಪರೇಡ್​ ವ್ಯವಸ್ಥೆ, ಸಾಂಸತಿಕ ಕಾರ್ಯಕ್ರಮಗಳ ಆಯೋಜನೆ, ಧನಿವರ್ಧಕ ಸೇರಿದಂತೆ ಕಾರ್ಯಕ್ರಮದ ವೇದಿಕೆ ವ್ಯವಸ್ಥೆ, ಕುರಿತು ಚಚಿರ್ಸಲಾಯಿತು.
ರೂಪೇಂದ್ರ ಸಿಂಗ್​, ತಾರಾಮಣಿ, ಪ್ರಶಾಂತ ವರಗಪ್ಪನವರ, ಎಂ. ಎ. ರಡ್ಡೇರ, ಜಿ. ಕುರ್ತಕೋಟಿ, ರವಿ ಗುಂಜೀಕರ, ವೀರಯ್ಯಸ್ವಾಮಿ ಬಿ, ಪಿ. ವೈ. ಶೆಟ್ಟೆಪ್ಪನವರ, ಶರಣು ಗೋಗೇರಿ, ಮಲ್ಲಪ್ಪ ಬ್ಯಾಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net