ಆಗಸ್ಟ್ 13 ರಿಂದ 15ರವರೆಗೆ ಹರ್ ಘರ್ ತಿರಂಗಾ ಅಭಿಯಾನ

1659449912726
Published on

ಚಾಮರಾಜನಗರ:ಸಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 13 ರಿಂದ 15ರವರೆಗೆ ಜಿಲ್ಲೆಯಲ್ಲಿ  ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಂಡಿದ್ದು, ಮನೆ ಮನೆಗಳಲ್ಲಿ, ಸರ್ಕಾರಿ ಕಚೇರಿ, ಕೈಗಾರಿಕೆ, ಅಂಗಡಿ, ವಾಣಿಜ್ಯ ಸಂಕಿರ್ಣಗಳಲ್ಲಿ, ವಸತಿ ಸಮುಚ್ಚಯ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಹಾರಿಸಲಿದ್ದು, ಈ ಮಹತ್ತರವಾದ ಕಾರ್ಯಕ್ರಮಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಮನವಿ ಮಾಡಿದರು.

ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿಂದು ಹರ್ ಘರ್ ತಿರಂಗಾ ಅಭಿಯಾನದ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ಯುವ ಪೀಳಿಗೆ ಮತ್ತು ಎಲ್ಲಾ ಭಾರತೀಯರಿಗೂ ದೇಶಕ್ಕೆ ಸ್ವಾತಂತ್ರ್ಯ ಬಂದ ನೆನಪುಗಳನ್ನು ತಿಳಿಸಿಕೊಡಬೇಕಿದೆ. ಅಸಂಖ್ಯಾತ ಹೋರಾಟ, ತ್ಯಾಗ, ಬಲಿದಾನದ ಕಾರಣದಿಂದ ಭಾರತಕ್ಕೆ ಪ್ರಾಪ್ತಿಯಾದ ಸ್ವಾತಂತ್ರ್ಯಕ್ಕೆ ಈಗ ಅಮೃತ ಮಹೋತ್ಸವ ಸಂಭ್ರಮ. ಈ ಸಮಯದಲ್ಲಿ ಇದಕ್ಕೆ ಕಾರಣರಾದ ಎಲ್ಲರನ್ನೂ ಸ್ಮರಿಸಿ ಗೌರವಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.

ಶಾಲಾ ಮಕ್ಕಳೊಂದಿಗೆ ಆಗಸ್ಟ್ 11 ರಿಂದ 15ರವರೆಗೆ ಅಮೃತ ಮಹೋತ್ಸವ ಹಾಗೂ ಹರ್ ಘರ್ ತಿರಂಗಾ ಅಭಿಯಾನ ಸಂಬಂಧ ಮೆರವಣಿಗೆ, ಜಾಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸರ್ಕಾರಿ ನೌಕರರು, ಶಿಕ್ಷಕರು, ಸಮಾಜ ಸೇವಕರು, ಸ್ವ ಸಹಾಯ ಸಂಘದ ಮಹಿಳೆಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಈ ಅಭಿಯಾನದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ. ಹರ್ ಘರ್ ತಿರಂಗಾ ಅಭಿಯಾನವನ್ನು ಆಚರಿಸುವ ಸಂದರ್ಭದಲ್ಲಿ ಧ್ವ ಸಂಹಿತೆಯನ್ನು ತಪ್ಪದೇ ಪಾಲಿಸಬೇಕು. ಈ ಮಹತ್ತರ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನತೆ ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡು ಸಹಕರಿಸಬೇಕು ಎಂದು ತಿಳಿಸಿದರು. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ರಾಷ್ಟ್ರಧ್ವಜವನ್ನು ಅಧಿಕಾರಿಗಳಿಗೆ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net