ಮರಳುಗಾರಿಕೆ ದಂಧೆ ಮೇಲೆ ಅಧಿಕಾರಿಗಳ ದಾಳಿ

16M.D.R.1
ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದ ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ವೇಳೆ ದಾಳಿ ಮಾಡಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು 15 ಟನ್ ಮರಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Published on

ಮದ್ದೂರು: ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ಮರಳುಗಾರಿಕೆ ಮಾಡುತ್ತಿದ್ದ ವೇಳೆ ದಾಳಿ ಮಾಡಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು 15 ಟನ್ ಮರಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಲೂಕಿನ ಅಜ್ಜಹಳ್ಳಿ ಗ್ರಾಮದ ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬುಧವಾರ ದಾಳಿ ಮಾಡಿದ ಅಧಿಕಾರಿಗಳು ಅಂದಾಜು 15 ಟನ್ ಮರಳು ಹಾಗೂ ಕೊಪ್ಪರಿಕೆಗಳನ್ನು ವಶಪಡಿಸಿಕೊಂಡಿದ್ದಾರೆ.

ಅಧಿಕಾರಿಗಳ ದಾಳಿಗೆ ಬೆಚ್ಚಿದ ಮರಳು ದಂಧೆಕೋರರು ತುಂಬಿ ಹರಿಯುತ್ತಿರುವ ನದಿಯಲ್ಲೇ ಪರಾರಿಯಾಗಿದ್ದಾರೆ. ಈಗಾಗಲೇ ಇದೇ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಸಂಬಂಧ 2 ಪ್ರಕರಣಗಳನ್ನು ದಾಖಲಿಸಿದ್ದರೂ ದಂಧೆ ಮುಂದುವರಿಯುತ್ತಿದ್ದು, ಅಕ್ರಮ ಮರಳುಗಾರಿಕೆ ನಡೆಸುತ್ತಿರುವವರ ವಿರುದ್ಧ ಮದ್ದೂರು ನ್ಯಾಯಾಲಯದಲ್ಲಿ ದೂರು ದಾಖಲಿಸುವುದಾಗಿ ಭೂ ವಿಜ್ಞಾನಿ ಇಲಾಖೆಯ ಅಧಿಕಾರಿ ಮಹೇಶ್ ಎಚ್ಚರಿಕೆ ನೀಡಿದರು. ದಾಳಿ ವೇಳೆ ಗ್ರಾಮ ಆಡಳಿತಾಧಿಕಾರಿ ಮಮತಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net