

ಹಿರೇಕೆರೂರ: ಆಟೋರಿಕ್ಷಾ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಓರ್ವ ಮೃತಪಟ್ಟು ಮೂವರು ಗಾಯಗೊಂಡ ಘಟನೆ ತಾಲೂಕಿನ ಚಿಕ್ಕೇರೂರ ರಸ್ತೆಯಲ್ಲಿ ಭಾನುವಾರ ನಡೆದಿದೆ.
ಪಟ್ಟಣದ ಜಾವಿದಖಾನ್ ನಗರದ ಮುಬಾರಕ್ ಅನ್ವರಅಹ್ಮದ ಮೇದೂರ ಮೃತನು. ದಾದಾಪೀರ ಆಬೀದಸಾಬ ಖತೀಬ, ಸಲ್ಮಾ ದಾದಾಪೀರ ಖತೀಬ, ಬೀಬಿಉಮೇರಾ ದಾದಾಪೀರ ಖತೀಬ ಗಾಯಗೊಂಡಿದ್ದು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಹಿರೇಕೆರೂರ ಪಟ್ಟಣದಿಂದ ಚಿಕ್ಕೇರೂರ ಗ್ರಾಮಕ್ಕೆ ತೆರಳುತ್ತಿದ್ದರು. ಮಾರ್ಗಮಧ್ಯೆ ಬೈಕ್ ಹಾಗೂ ಆಟೋರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮುಬಾರಕ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.