

ಹನೂರು: ತಾಲೂಕಿನ ಮಲೆಮಹದೇಶ್ವರಬೆಟ್ಟ ತಾಳುಬೆಟ್ಟ ಮಾರ್ಗಮಧ್ಯೆ ಭಾನುವಾರ ಆಟೋ-ಕಾರಿನ ಡಿಕ್ಕಿ ಸಂಭವಿಸಿದ್ದು, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ಬೆಂಗಳೂರಿನ ಕೋಣನಕುಂಟೆ ಕ್ರಾಸ್ ನಿವಾಸಿ ವರಲಕ್ಷ್ಮೀ(30) ಗಾಯಗೊಂಡವರು. ಇವರು ಬೆಳಗ್ಗೆ ಪತಿ ನಂಜುಂಡ ಹಾಗೂ ಇಬ್ಬರು ಮಕ್ಕಳೊಂದಿಗೆ ಪ್ಯಾಸೆಂಜರ್ ಆಟೋದಲ್ಲಿ ಮ.ಬೆಟ್ಟಕ್ಕೆ ತೆರಳಿದ್ದು, ವೂಜೆ ಸಲ್ಲಿಸಿ ಗ್ರಾಮಕ್ಕೆ ವಾಪಾಸಾಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಕಾರು,ಆಟೋ ಡಿಕ್ಕಿ ಸಂಭವಿಸಿದೆ. ಪರಿಣಾಮ ವರಲಕ್ಷ್ಮೀ ಗಾಯಗೊಂಡರು. ಮ.ಬೆಟ್ಟ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ದಾಖಲಾಗಿದೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.