ಟ್ರಾೃಕ್ಟರ್ ಡಿಕ್ಕಿಯಾಗಿ ಆಟೋ ಚಾಲಕ ಸಾವು

Published on

ಅರಕಲಗೂಡು: ತಾಲೂಕಿನ ಕತ್ತಿಮಲ್ಲೇನಹಳ್ಳಿ ಬಳಿ ಶನಿವಾರ ಟ್ರ್ಯಾಕ್ಟರ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಮೃತಪಟ್ಟಿದ್ದಾರೆ. ಆಟೋದಲ್ಲಿದ್ದ ಮತ್ತೊಬ್ಬರು ಗಾಯಗೊಂಡಿದ್ದಾರೆ.

ಮರಡಿ ಬೈರಾಪುರ ಗ್ರಾಮದ ಲಿಂಗರಾಜು (65) ಮೃತರು. ಕಾಕೋಡನಹಳ್ಳಿ ಕಡೆಯಿಂದ ಪಾಪಣ್ಣ ಅವರು ಆಟೋದಲ್ಲಿ ಬರುತ್ತಿದ್ದಾಗ ಎದುರಿನಿಂದ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಪಾಪಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಟೋದಲ್ಲಿದ್ದ ಮತ್ತೊಬ್ಬ ಬೈರಾಪುರ ಗ್ರಾಮದ ಪಾಪಣ್ಣ (64) ಎಂಬುವರಿಗೆ ಪೆಟ್ಟು ಬಿದ್ದಿದ್ದು, ಹಾಸನ ಆಸ್ಪತ್ರೆಗೆ ಸಾಗಿಸಲಾಯಿತು. ಅರಕಲಗೂಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net