ಆಟೋ ಚಾಲಕರ ಪ್ರತಿಭಟನೆ

Published on

ಹುಬ್ಬಳ್ಳಿ: ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘ ಹಾಗೂ ಹುಬ್ಬಳ್ಳಿ ಆಟೋ ಮಾಲಕರು ಹಾಗೂ ಚಾಲಕರ ಸಂಘದಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಡಿ. 23ರಂದು ಬೆಳಗ್ಗೆ 11.30ಕ್ಕೆ ನಗರದ ಗಬ್ಬೂರ್ ಬಸವೇಶ್ವರ ಆಟೋ ರಿಕ್ಷಾ ನಿಲ್ದಾಣದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪ್ರತಿಭಟನೆ ಮೆರವಣಿಗೆ ಮೂಲಕ ಆರ್ ಟಿಒ ಕಚೇರಿಗೆ ತೆರಳಿ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಘದ ಶೇಖರಯ್ಯ ಮಠಪತಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net